ತುಮಕೂರು: ದೂರು ನೀಡಲು ಬಂದ ಮಹಿಳೆಯೊಂದಿಗೆ ಡಿವೈಎಸ್‌ಪಿಯೊಬ್ಬರು ತಮ್ಮ ಕಚೇರಿಯಲ್ಲೇ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ಮಧುಗಿರಿ ಉಪವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಲೈಂಗಿಕ ಕ್ರಿಯೆ ನಡೆಸಿರುವ ವಿಡಿಯೋ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಡಿವೈಎಸ್‌ಪಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.
ಜಮೀನು ವ್ಯಾಜ್ಯದ ಬಗ್ಗೆ ಪಾವಗಡ ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಸಂಬಂಧ ವಿಚಾರಿಸುವ ಸಲುವಾಗಿ ಮಹಿಳೆಯನ್ನು ಡಿವೈಎಸ್‌ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನು ಪುಸಲಾಯಿಸಿದ ರಾಮಚಂದ್ರಪ್ಪ ಆಕೆಯನ್ನು ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋಗಿ ಲೈಂಗಿಕ ಕ್ರಿಯೆ ನಡೆಸಿದ್ದಾರೆ.
ಮಹಿಳೆ ಜೊತೆ ಡಿವೈಎಸ್‌ಪಿ ರಾಮಚಂದ್ರಪ್ಪ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ವಿಡಿಯೋವನ್ನು ವ್ಯಕ್ತಿಯೊಬ್ಬರು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ಇದೀಗ ಅಧಿಕಾರಿಯ ರಾಸಲೀಲೆಯ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.