ಸ್ನೇಹಿತನ ಮನೆಗೆ ಹೋಗಿದ್ದ ಮಹಿಳೆಯನ್ನು ಬೆದರಿಸಿ ಸಾಮೂಹಿಕ ಅತ್ಯಾಚಾರ!

0
171

ಆನೇಕಲ್: ದೊಡ್ಡ ನಾಗಮಂಗಲ ಸಾಯಿ ಲೇಔಟ್​ನಲ್ಲಿ ಮಹಿಳೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ದೊಡ್ಡ ನಾಗಮಂಗಲ ಸಾಯಿ ಲೇಔಟ್​ನಲ್ಲಿರುವ ತಮ್ಮ ಸ್ನೇಹಿತನ ಮನೆಗೆ ಹೋಗಿದ್ದರು. ಈ ವೇಳೆ ಮನೆಯೊಳಗೆ ಬಂದ ಇಬ್ಬರು ವ್ಯಕ್ತಿಗಳು ಪೊಲೀಸರಿಗೆ ದೂರು ನೀಡುವುದಾಗಿ ಹೆದರಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಅತ್ಯಾಚಾರ ಎಸಗಿದ ಬಳಿಕ ಆರೋಪಿಗಳು ಮಹಿಳೆ ಬಳಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಆಗ, ಸಂತ್ರಸ್ತೆ ತನ್ನ ಸ್ನೇಹಿತೆಯ ಅಕೌಂಟ್​ನಿಂದ ಹಣ ನೀಡಿದ್ದಾಳೆ. ಆರೋಪಿಗಳು, ಈ ಹಣವನ್ನು ಬೆಟ್ಟಿಂಗ್ ಆ್ಯಪ್ ಅಕೌಂಟ್​​ಗೆ ಹಾಕಿಸಿಕೊಂಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಆರೋಪಿಗಳು, ಸಂತ್ರಸ್ತೆಯ ಮತ್ತು ಇವರ ಸ್ನೇಹಿತನ ಮೊಬೈಲ್ ಕಸಿದುಕೊಂಡಿದ್ದಾರೆ. ಸಾಲದಕ್ಕೆ ಮನೆಯಲ್ಲಿದ್ದ ಪ್ರಿಡ್ಜ್, ವಾಶಿಂಗ್ ಮೆಷಿನ್ ಹೊತ್ತೊಯ್ದಿದ್ದಾರೆ. ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಪೊಲೀಸರು ಮೂವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸರಿಂದ ತನಿಖೆ ಮುಂದುವರೆದಿದೆ.

LEAVE A REPLY

Please enter your comment!
Please enter your name here