Sunday, July 14, 2024
Homeನಿಧನನೇತ್ರಾವತಿ ನದಿಗೆ ಮಗುವಿನೊಂದಿಗೆ ಹಾರಿದ ಮಹಿಳೆ

ನೇತ್ರಾವತಿ ನದಿಗೆ ಮಗುವಿನೊಂದಿಗೆ ಹಾರಿದ ಮಹಿಳೆ

ಮಂಗಳೂರು : ನಗರ ಹೊರವಲಯದ ಅಡ್ಯಾರ್ ಪದವು ಸಮೀಪದ 30 ವರ್ಷ ಪ್ರಾಯದ ಮಹಿಳೆಯೊಬ್ಬರು ಒಂದು ವರ್ಷ ಪ್ರಾಯದ ತನ್ನ ಹೆಣ್ಣು ಮಗುವನ್ನು ಸೊಂಟಕ್ಕೆ ಕಟ್ಟಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಸಂಜೆ ಹರೇಕಳ- ಪಾವೂರು ಕಡವಿನ ಬಳಿ ನಡೆದಿರುವುದಾಗಿ ವರದಿಯಾಗಿದೆ‌‌.

ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಚೈತ್ರಾ ಎಂದು ಗುರುತಿಸಲಾಗಿದೆ. ಈಕೆ ಶುಕ್ರವಾರ ಮಧ್ಯಾಹ್ನದ ಬಳಿಕ ತನ್ನ ಮಗುವಿನೊಂದಿಗೆ ನಾಪತ್ತೆಯಾಗಿದ್ದರು ಎಂದು ಹೇಳಲಾಗಿದೆ‌. ಶುಕ್ರವಾರ ಸಂಜೆ ಈಕೆ ರಿಕ್ಷಾವೊಂದರಲ್ಲಿ ಅಡ್ಯಾರ್-ಹರೇಕಳ ಸೇತುವೆ ದಾಟಿ ಹರೇಕಳ-ಪಾವೂರು ಕಡವಿನ ಬಳಿ ಜಂಕ್ಷನ್‌ನಲ್ಲಿ ಇಳಿದಿದ್ದರು ಎನ್ನಲಾಗಿದೆ. ನಂತರ‌ ಈಕೆ ನದಿ ತೀರದ ಕಾಲುದಾರಿಯಾಗಿ ಪಾವೂರು ಗಾಡಿಗದ್ದೆ ಕಡೆ ನಡೆದುಕೊಂಡು ಹೋಗಿರುವುದನ್ನು ಸ್ಥಳೀಯರು ಕಂಡಿದ್ದರು ಎಂದು ತಿಳಿದು ಬಂದಿದೆ.

RELATED ARTICLES
- Advertisment -
Google search engine

Most Popular