Sunday, March 23, 2025
Homeನಿಧನಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಕುಸಿದು ಬಿದ್ದು ಸಾವು

ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಕುಸಿದು ಬಿದ್ದು ಸಾವು

ಚಿತ್ರದುರ್ಗ: ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿಯೊಬ್ಬರು ಲೋ ಬಿಪಿಯಿಂದ ಸಾವನ್ನಪ್ಪಿರುವ ಘಟನೆ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ನಡೆದಿದೆ. ಚಳ್ಳಕೆರೆಯ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಚಳ್ಳಕೆರೆ ಪಟ್ಟಣದ ವಿಠಲ ನಗರದ 55ರ ಹರೆಯ ಯಶೋಧಮ್ಮ ಸಾವನ್ನಪ್ಪಿರುವ ದುರ್ದೈವಿ. ಕರ್ತವ್ಯದ ವೇಳೆ ಯಶೋಧಮ್ಮ ಅಸ್ವಸ್ಥರಾದರು. ಕುಸಿದು ಬಿದ್ದ ಅವರನ್ನು ಚಳ್ಳಕೆರೆ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅವರು ದಾರಿ ಮಧ್ಯೆ ಕೊನೆಯುಸಿರೆಳೆದರು ಎಂದು ವರದಿಯಾಗಿದೆ.
ಚಳ್ಳಕೆರೆ ಆಸ್ಪತ್ರೆಗೆ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular