ವಂದೇ ಮಾತರಂ ಗೀತೆಯ 2 ಚರಣ ಮಾತ್ರ ಹಾಡಲು ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಕೆ

0
6

ಬೆಂಗಳೂರು: ವಂದೇ ಮಾತರಂ ಗೀತೆಯ 2 ಚರಣ ಮಾತ್ರ ಹಾಡಲು ರಾಜ್ಯ ಸರ್ಕಾರ ತೀರ್ಮಾನ ಹಿನ್ನೆಲೆ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ರಾಷ್ಟ್ರಗೀತೆಯನ್ನು ಕಡಿತಗೊಳಿಸುವ ಕಾನೂನು ವ್ಯಾಪ್ತಿ ರಾಜ್ಸರ್ಕಾರಕ್ಕಿಲ್ಲ ಎಂದು ಉಲ್ಲೇಖಿಸಿ ವಕೀಲ ಗಿರೀಶ್ ಭಾರದ್ವಾಜ್ ಹೈಕೋರ್ಟ್​​ ಮೊರೆ ಹೋಗಿದ್ದಾರೆ. ಕಾಯ್ದೆಯಿಂದ ಮಾಡಲಾಗದ್ದನ್ನು ರಾಜ್ಯಸರ್ಕಾರ ಆದೇಶದಿಂದ ಮಾಡಹೊರಟಿದೆ ಎಂದವರು ದೂರಿದೆ.

ವಂದೇ ಮಾತರಂ ಗೀತೆಯನ್ನು 2 ಚರಣಗಳಿಗೆ ಸೀಮಿತಗೊಳಿಸುವಂತಿಲ್ಲ. ಹೀಗಾಗಿ ಸೆಪ್ಟೆಂಬರ್​​ 8ರ ರಾಜ್ಯ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಲು ಮನವಿ ಮಾಡಲಾಗಿದೆ. ಸಚಿವ ಸಂಪುಟದ ನಿರ್ಣಯ ಆಧರಿಸಿ ರಾಜ್ಯಸರ್ಕಾರ ಈ ಬಗ್ಗೆ ಆದೇಶಿಸಿತ್ತು. ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ, ರಾಜ್ಯಪಾಲರ ಕಾರ್ಯಕ್ರಮಗಳನ್ನು ಹೊರತುಪಡಿಸಿ ಉಳಿದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ 2 ಚರಣ ಮಾತ್ರ ಹಾಡಲು ರಾಜ್ಯ ಸರ್ಕಾರ ತೀರ್ಮಾನಿಸಿತ್ತು.