ಕಳೆದ ಮೂರು ವರ್ಷಗಳ ಹಿಂದೆ ಮೈಸೂರಿನ ಹೊರವಲಯದಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಇಡೀ ದೇಶವೇ ಬೆಚ್ಚಿ ಬೀಳಿಸಿತ್ತು. ಇದೀಗ ಮೈಸೂರಿನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಯುವತಿಯ ಮೇಲೆ ಆಕೆ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಮೈಸೂರಿನಲ್ಲಿ ಇದೀಗ ಮತ್ತೊಂದು ಗ್ಯಾಂಗ್ ರೇಪ್ ನಡೆದಿದ್ದು, ಯುವತಿಯ ಮೇಲೆ ಆಕೆ ಸ್ನೇಹಿತರೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಮಡಿಕೇರಿ ಮೂಲದ ಯುವತಿಯಿಂದ ಇದೀಗ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ.
ಮೈಸೂರಿನ ವಿಜಯನಗರ ಠಾಣೆಯಲ್ಲಿ ಯುವತಿ ಖುದ್ದು ಹಾಜರಾಗಿ ದೂರು ದಾಖಲಿಸಿದ್ದಾಳೆ. ನಿನ್ನೆ ಮಡಿಕೇರಿಯಿಂದ ಬಂದ ಯುವತಿ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದಳು. ಈ ವೇಳೆ ಜೊತೆಗೆ ಇದ್ದಂತಹ ಸ್ನೇಹಿತರೆ ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಯುವತಿ ವಿಜಯನಗರ ಠಾಣೆಯಲ್ಲಿ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.