ಕುಂಬಳೆ :ಉಪ್ಪಳ ಬಪ್ಪಾಯಿ ಹನಫಿ ಮಸ್ಜಿದ್ ಸಮೀಪದ ಅಮಾನ್ ಮಂಜಿಲ್‌ನ ಮುಹಮ್ಮದ್ ಫಾರೂಕ್ (35) ಅವರನ್ನು ಮನೆಯಿಂದ ಹೊರಕ್ಕೆ ಕರೆದೊಯ್ದು ಹಲ್ಲೆಗೈದು ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿ, ಬಂಬ್ರಾಣ ನಿವಾಸಿ ಕಿರಣ್ ರಾಜ್ (24) ಹಾಗು 17 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಕಿರಣ್ ರಾಜ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ. 17 ವರ್ಷದ ಬಾಲಕನ ಕುರಿತು ಜುವೈನಲ್ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಘಟನೆಗೆ ಸಂಬಂಧಿಸಿ ನಾಲ್ವರ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದು, ಇನ್ನಿಬ್ಬರ ಬಂಧನಕ್ಕೆ ಶೋಧ ನಡೆಯುತ್ತಿದೆ. ಫಾರೂಕ್ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.