ಚಂಡೀಗಢ: ತಲೆಗೆ ಗುಂಡು ತಗುಲಿ ಲೂಧಿಯಾನ ಪಶ್ಚಿಮ ಜಿಲ್ಲೆಯ ಆಮ್ ಆದ್ಮಿ ಪಕ್ಷದ ಶಾಸಕ ಗುರುಪ್ರೀತ್ ಗೋಗಿ ಅವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಗುರುಪ್ರೀತ್ ಗೋಗಿ (58) ಅವರ ಗುಂಡು ತಗುಲಿದ ನಂತರ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಶಾಸಕರು ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಜಸ್ಕರ್ ಸಿಂಗ್ ತೇಜ ತಿಳಿಸಿದ್ದಾರೆ.
ಗೋಗಿ ಅವರ ಮೃತದೇಹವನ್ನು ಡಿಎಂಸಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ತಲೆಗೆ ಆಕಸ್ಮಿಕವಾಗಿ ಗುಂಡು ತಗುಲಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಅಸಲಿ ಸತ್ಯ ಗೊತ್ತಾಗಲಿದೆ ಎಂದು ತೇಜ ಹೇಳಿದ್ದಾರೆ.