ಕಾಸರಗೋಡು ಜಿಲ್ಲಾ ಕುಲಾಲ ಸಂಘ ಮಂಜೇಶ್ವರ ಶಾಖೆಯಿಂದ ಜು.26ರಂದು ಆಟಿದ ಕೂಟ ಹಾಗೂ ವಾರ್ಷಿಕ ಮಹಾಸಭೆ

0
4

ಮಂಜೇಶ್ವರ: ಕಾಸರಗೋಡು ಜಿಲ್ಲಾ ಕುಲಾಲ ಸಂಘ (ರಿ.) ಮಂಜೇಶ್ವರ ಶಾಖೆಯ ವತಿಯಿಂದ ಆಟಿದ ಕೂಟ ಹಾಗೂ ವಾರ್ಷಿಕ ಮಹಾಸಭೆ ಕಾರ್ಯಕ್ರಮವು ಜುಲೈ 26ರಂದು (ಭಾನುವಾರ) ಬೆಳಿಗ್ಗೆ 9 ಗಂಟೆಯಿಂದ ಜಿಲ್ಲಾ ಕುಲಾಲ ಸಮುದಾಯ ಭವನ, ತೂಮಿನಾಡು ಕುಂಜತ್ತೂರು ಇಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 9 ಗಂಟೆಯಿಂದ ವಿವಿಧ ವಯೋಮಾನದವರಿಗೆ ಭಕ್ತಿ ಭಾವಗೀತೆ ಸ್ಪರ್ಧೆ ಏರ್ಪಡಿಸಲಾಗಿದೆ. ಸ್ಪರ್ಧೆಯನ್ನು 1ರಿಂದ 4ನೇ ತರಗತಿ, 5ರಿಂದ 7ನೇ ತರಗತಿ, 8ರಿಂದ 10ನೇ ತರಗತಿ ಹಾಗೂ 15 ವರ್ಷ ಮೇಲ್ಪಟ್ಟವರ ವಿಭಾಗಗಳಲ್ಲಿ ನಡೆಸಲಾಗುತ್ತದೆ.

ಬೆಳಿಗ್ಗೆ 10 ಗಂಟೆಯಿಂದ ಮಕ್ಕಳಿಂದ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮಗಳು ಜರುಗಲಿದ್ದು, ಬೆಳಿಗ್ಗೆ 11 ಗಂಟೆಯಿಂದ ವಾರ್ಷಿಕ ಮಹಾಸಭೆ ಹಾಗೂ ಸಭಾ ಕಾರ್ಯಕ್ರಮಗಳು ನಡೆಯಲಿವೆ.

ಮಧ್ಯಾಹ್ನ 1 ಗಂಟೆಯಿಂದ ಆಟಿ ಮಾಸದ ವಿಶೇಷ ಭೋಜನವನ್ನು ಸ್ವಜಾತಿ ಬಾಂಧವರ ಸಹಕಾರದೊಂದಿಗೆ ಆಯೋಜಿಸಲಾಗಿದೆ.

ಸ್ಪರ್ಧೆಗಳಲ್ಲಿ ಮಂಜೇಶ್ವರ ಶಾಖೆಯ ವ್ಯಾಪ್ತಿಗೆ ಒಳಪಡುವ ಕುಲಾಲ ಸಮುದಾಯದ ಸದಸ್ಯರಿಗೆ ಮಾತ್ರ ಭಾಗವಹಿಸಲು ಅವಕಾಶವಿದ್ದು, ಸ್ಪರ್ಧಿಗಳು ಮುಂಚಿತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಸಂಘದ ಪ್ರಕಟಣೆ ತಿಳಿಸಿದೆ.