ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ವೈದ್ಯಕೀಯ ಚಿಕಿತ್ಸೆಗೆ ನೆರವು

0
153


ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಕಾರ್ಕಳ ತಾಲೂಕಿನ ಕಾಬೆಟ್ಟು ಚೊಲ್ಪಾಡಿ ನಿವಾಸಿ ಸವಿತಾ ಇವರು ಕಳೆದ ಮೂರು ತಿಂಗಳ ಹಿಂದೆ ಹೆರಿಗೆ ಆಗಿ ಬಾಣಂತಿ ಕಾಯಿಲೆಯಿಂದ ಇತ್ತೀಚೆಗೆ ನಿಧನರಾಗಿರುತ್ತಾರೆ. ಆರ್ಥಿಕವಾಗಿ ಬಹಳಷ್ಟು ಸಂಕಷ್ಟದಲ್ಲಿರುವ ಇವರ ಮೂರು ತಿಂಗಳಿನ ಮಗು ಅನಾರೋಗ್ಯದಿಂದ ಬಳಲುತ್ತಿದ್ದು ಈ ಮಗುವಿನ ವೈದ್ಯಕೀಯ ಚಿಕಿತ್ಸೆಗೆ ಸಂಘದ ಸದಸ್ಯರ ಹಾಗೂ ಗೌರವ ಸದಸ್ಯರ ಸಹಕಾರದೊಂದಿಗೆ ರೂ. 5,000/- ಸಹಾಯಧನ ನೀಡಲಾಯಿತು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಸಹಾಯಧನದ ಮೊತ್ತವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷರಾದ ಬೋಳ ಉದಯ ಅಂಚನ್, ಸದಸ್ಯ ಕೆಮ್ಮಣ್ಣು ಪ್ರದೀಪ್ ಸುವರ್ಣ ಈ ಸಂದರ್ಭದಲ್ಲಿ ಉಪಸ್ಥಿತಿತರಿದ್ದರು.

LEAVE A REPLY

Please enter your comment!
Please enter your name here