
ರಾಜ್ಯಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಶುಕ್ರವಾರ ಸಂಘದ ಸಭಾಂಗಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಸುರೇಶ್ ಅಬ್ಬನಡ್ಕ ಅಧ್ಯಕ್ಷತೆ ವಹಿಸಿದ್ದರು.
ಪುನಾರು ಶ್ರೀ ಶಾಸ್ತಾವು ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಮುರಳಿಧರ ಉಡುಪ ಪಿಲಾರು ಅವರು ರಾಷ್ಟ್ರ ನಾಯಕರ ಭಾವಚಿತ್ರಕ್ಕೆ ಮಾಳಾರ್ಪಣೆ ಮಾಡಿ ದೀಪ ಬೆಳಗಿಸಿ ಪುಷ್ಪಾರ್ಚನೆ ಸಲ್ಲಿಸಿದರು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿಯವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಅಬ್ಬನಡ್ಕ ಸೇವಾ ಟ್ರಸ್ಟಿನ ಅಧ್ಯಕ್ಷರಾದ ಪ್ರೇಮ್ ಕುಲಾಲ್, ಸಂಘದ ನಿಕಟಪೂರ್ವ ಅಧ್ಯಕ್ಷರಾದ ದಿನೇಶ್ ಪೂಜಾರಿ, ಕಾರ್ಯದರ್ಶಿ ಸತೀಶ್ ಪೂಜಾರಿ, ಕೋಶಾಧಿಕಾರಿ ಪ್ರದೀಪ್ ಸುವರ್ಣ, ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನ ಕೋಟ್ಯಾನ್, ಪೂರ್ವಾಧ್ಯಕ್ಷರಾದ ರಾಜೇಶ್ ಕೋಟ್ಯಾನ್, ಸದಸ್ಯರಾದ ವೀಣಾ ಪೂಜಾರಿ, ವೀಣಾ ಆಚಾರ್ಯ, ಅನ್ನಪೂರ್ಣ ಕಾಮತ್, ಕೀರ್ತನ್ ಪೂಜಾರಿ ಹಾಗೂ ಸಂಗೀತ ತಂಡದ ಸದಸ್ಯ ತ್ರಿವೇಣಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
