ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ನೇತೃತ್ವದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ರಜತ ಮಹೋತ್ಸವ ಸಭಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ನಂದಳಿಕೆ ಅಂಗನವಾಡಿ ಕೇಂದ್ರದಲ್ಲಿ ಕಳೆದ 27 ವರ್ಷಗಳಿಂದ ಅಂಗನವಾಡಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಪ್ರಭಾ ಎಂ. ಶರ್ಮಾ ಅವರನ್ನು ಸನ್ಮಾನಿಸಲಾಯಿತು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಲೀಲಾ ಪೂಜಾರಿ, ಉಪಾಧ್ಯಕ್ಷ ಸತೀಶ್ ಪೂಜಾರಿ, ಜೊತೆ ಕಾರ್ಯದರ್ಶಿ ಅನ್ನಪೂರ್ಣ ಕಾಮತ್, ಕೋಶಾಧಿಕಾರಿ ಆರತಿ, ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸುರೇಶ್ ಕಾಸ್ರಬೈಲು, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಕಾರ್ಯದರ್ಶಿ ಶ್ರದ್ಧಾ ಪೂಜಾರಿ, ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸದಸ್ಯರಾದ ಹರೀಶ್ ಪೂಜಾರಿ, ಸುರೇಶ್ ಪೂಜಾರಿ, ಪುಷ್ಪ ಕುಲಾಲ್, ಲಲಿತಾ ಆಚಾರ್ಯ, ಪದ್ಮಶ್ರೀ ಪೂಜಾರಿ, ಅಶ್ವಿನಿ ಪ್ರಭಾಕರ್, ವೀಣಾ ಪೂಜಾರಿ, ವೀಣಾ ಆಚಾರ್ಯ, ಗೀತಾ ಶೆಟ್ಟಿ, ಹರಿಣಿ ಪೂಜಾರಿ ಮೊದಲಾದವರಿದ್ದರು.