ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್’ನ 26 ನೇ ವರ್ಷಾಚರಣೆ ಅಂಗವಾಗಿ ಡಿಸೆಂಬರ್ 14 ರಂದು ಭಾನುವಾರ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್’ನ ರಜತ ಮಹೋತ್ಸವ ಸಭಾಂಗಣದಲ್ಲಿ ತಿಂಗಳ ಸಂಭ್ರಮ ಹಾಗೂ ಮನದಾಳದ ಮಾತು ವಿಶೇಷ ಕಾರ್ಯಕ್ರಮ ಜರಗಲಿದೆ.
ಸಂಘದ ಅಧ್ಯಕ್ಷರಾದ ಸುರೇಶ್ ಅಬ್ಬನಡ್ಕ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರಗಲಿದೆ. ಸಂಘದ ಸದಸ್ಯರಾದ ಆರತಿ ಅಬ್ಬನಡ್ಕ ಹಾಗೂ ಪುಷ್ಪ ಕುಲಾಲ್ ಅವರು ಮನದಾಳದ ಮಾತು ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ , ಎಂದು ಸಂಘದ ಕಾರ್ಯದರ್ಶಿ ಸತೀಶ್ ಅಬ್ಬನಡ್ಕ ಪತ್ರಿಕಾ ಪ್ರಕಟನೆಗೆ ತಿಳಿಸಿದ್ದಾರೆ.

