ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನ ರಜತ ಮಹೋತ್ಸವ ಸಭಾಂಗಣದಲ್ಲಿ ೧೯ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಂಭ್ರಮದ ಅಂಗವಾಗಿ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯವರಿAದ ಕುಣಿತ ಭಜನಾ ಕಾರ್ಯಕ್ರಮ ಜರಗಿತು.
ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸುರೇಶ್ ಕಾಸರಬೈಲು ಅವರು ಭಜನಾ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ನ ಸ್ಥಾಪಕಾಧ್ಯಕ್ಷರಾದ ವಿಠಲ ಮೂಲ್ಯ, ಪೂರ್ವಾಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಕೋಶಾಧಿಕಾರಿ ಆರತಿ, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ಅಧ್ಯಕ್ಷರಾದ ಸುಲೋಚನಾ ಕೋಟ್ಯಾನ್, ಭಜನಾ ಮಂಡಳಿಯ ಸದಸ್ಯರು ಉಪಸ್ಥಿತಿತರಿದ್ದರು.