Thursday, May 1, 2025
Homeಕಾಸರಗೋಡುವಿದ್ಯಾರ್ಥಿನಿಯ ಅಪಹರಣ ಮತ್ತು ಲೈಂಗಿಕ ಕಿರುಕುಳ: ಪೋಕ್ಸೋ ಕೇಸು ದಾಖಲು

ವಿದ್ಯಾರ್ಥಿನಿಯ ಅಪಹರಣ ಮತ್ತು ಲೈಂಗಿಕ ಕಿರುಕುಳ: ಪೋಕ್ಸೋ ಕೇಸು ದಾಖಲು

ಕಾಸರಗೋಡು: ಶಾಲೆಗೆ ತೆರಳುತ್ತಿದ್ದ ಹದಿನಾಲ್ಕರ ಹರೆಯದ ವಿದ್ಯಾರ್ಥಿನಿಯನ್ನು ಅಪಹರಿಸಿ ಕೊಂಡೊಯ್ದು ಆಕೆಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಬೇಕಲ ಪೊಲೀಸರಿಗೆ ದೂರು ನೀಡಲಾಗಿದೆ. ಅದರಂತೆ ಪೊಲೀಸರು ಪೋಕ್ಸೋ ಕೇಸು ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶವೊಂದರ ವಿದ್ಯಾರ್ಥಿನಿ ಶಾಲೆಗೆ ತೆರಳುತ್ತಿದ್ದ ದಾರಿ ಮಧ್ಯೆ ಯುವಕನೋರ್ವ ಆಕೆಯನ್ನು ಅಪಹರಿಸಿ ಪರಿಸರದ ಹಳೆ ಕಟ್ಟಡವೊಂದಕ್ಕೆ ಕರೆದೊಯ್ದು ಆಕೆ ಧರಿಸಿದ ಶಾಲಿನಿಂದ ಬಾಯಿ ಬಿಗಿದು ಬಳಿಕ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ. 11 ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಆದರೆ ಭಾನುವಾರ ಪೊಲೀಸರಿಗೆ ದೂರು ನೀಡಲಾಗಿದೆ.

ಈ ಬಾಲಕಿಯನ್ನು ಪೊಲೀಸರು ವೈದ್ಯಕೀಯ ತಪಾಸಣೆಗೊಳಪಡಿಸಿದ್ದು, ಆಕೆ ಲೈಂಗಿಕ ಕಿರುಕುಳಕ್ಕೊಳಗಾಗಿರುವುದು ಸಾಬೀತಾಗಿದೆ.

RELATED ARTICLES
- Advertisment -
Google search engine

Most Popular