ಉಡುಪಿ:ಅಬ್ದುಲ್ ಮುತಾಲಿ, ಉಪಾಧ್ಯಕ್ಷರು, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ, ಉಡುಪಿ ಜಿಲ್ಲೆ ಇವರು ಈಗಾಗಲೇ ಉಡುಪಿ ಜಿಲ್ಲಾ ವಕ್ಛ್ ಬೋರ್ಡಿನ ಅಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ. ಆದುದರಿಂದ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅವರ ಸೂಚನೆ ಮೇರೆಗೆ ದಾವುದ್ ಅಬೂಬಕರ್, ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷನಾದ ನಾನು ತಮ್ಮನ್ನು ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ಸ್ಥಾನದ ಜವಾಬ್ದಾರಿಯಿಂದ ವಿಮುಕ್ತಿಗೊಳಿಸಿರುತ್ತೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲು ಇಚ್ಛಿಸುತ್ತೇನೆ.