ಬಂಟ್ವಾಳ ತಾಲ್ಲೂಕಿನ ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ಈಚೆಗೆ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿದೆ.
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲ್ಲೂಕಿನ ಬೆಟ್ಟಗೆರೆ ಗ್ರಾಮದ ನಿವಾಸಿ ರವಿ ಸಂಜಯ್ (29) ಬಂಧಿತ ಆರೋಪಿ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.