ದಕ್ಷಿಣ ಕನ್ನಡ ಮತ್ತೆ ರಕ್ತ ಹರಿದು ಭಾರೀ ಕೋಲಾಹಲ ಎಬ್ಬಿಸಿದೆ. ಮಂಗಳೂರು ಜಿಲ್ಲೆಯಾದ್ಯಂತ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬಂಟ್ವಾಳದ ಬಳಿ ಅಬ್ದುಲ್ ರೆಹಿಮಾನ್ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕನಪಾಡಿಯಲ್ಲಿ ಬಂಟ್ವಾಳದ ದೀಪಕ್ (21) ಪೃಥ್ವಿರಾಜ್ (21) ಚಿಂತನ್ (19) ರನ್ನು ಅರೆಸ್ಟ್ ಮಾಡಿದ್ದಾರೆ. ರೆಹಮಾನ್ನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು. ಇದೀಗ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ.
ಏನಿದು ಪ್ರಕರಣ?: ಬಂಟ್ವಾಳದಲ್ಲಿ ಪಿಕಪ್ ವಾಹನ ಚಾಲಕನಾಗಿದ್ದ ಅಬ್ದುಲ್ ರಹಿಮಾನ್ ಎಂಬಾತನನ್ನು ಹಾಡಹಗಲೇ ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ರು. ಈ ಘಟನೆ ಇಡೀ ಮಂಗಳೂರನ್ನ ಬೆಚ್ಚಿ ಬೀಳಿಸಿದೆ.