Wednesday, September 11, 2024
Homeಮಂಗಳೂರುಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಸಿಗದಿರುವ ಬಗ್ಗೆ

ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಸಿಗದಿರುವ ಬಗ್ಗೆ

ಮಂಗಳೂರು ವಿಶ್ವವಿದ್ಯಾನಿಲಯಲ್ಲಿ  ವ್ಯಾಸಂಗ ಮಾಡಿದ ಮತ್ತು ಮಾಡುತ್ತಿರುವ 2022-23ನೇ  ಸಾಲಿನ ನಂತರದ ವಿದ್ಯಾರ್ಥಿಗಳಿಗೆ ವಿಶ್ವ ವಿದ್ಯಾನಿಲಯದ ಕಡೆಯಿಂದ ದೊರಕಬೇಕಾದ ಭೌತಿಕ ಅಂಕಗಳನ್ನು ಹೊಂದಿದ ಅಂಕಪಟ್ಟಿ ದೊರೆಯುತ್ತಿಲ್ಲ. ಈ ವಿಚಾರವಾಗಿ ಮಾನ್ಯ ಉಪ ಕುಲಪತಿ ಗಳನ್ನು ಕೇಳಿದಾಗ, ಪ್ರಸ್ತುತ ಭೌತಿಕ ಅಂಕಪಟ್ಟಿ ಗಳನ್ನು ನೀಡದಿರುವಂತೆ ಸರಕಾರದ ಆದೇಶವಿರುವುದಾಗಿಯೂ, ಈ ವಿಚಾರದಲ್ಲಿ ಬದಲಾವಣೆ ತರಲು ಸರ್ಕಾರಕ್ಕೆ ಮಾತ್ರ ಸಾಧ್ಯವಿರುದಾಗಿಯೂ ಅವರು ತಿಳಿಸಿರುತ್ತಾರೆ. ಆದರೆ ಈಗಾಗಲೇ ಸೆಮಿಸ್ಟರ್ ಒಂದಕ್ಕೆ ₹230ರಂತೆ ಅಂಕಪಟ್ಟಿ ಶುಲ್ಕವನ್ನು ವಿಶ್ವವಿದ್ಯಾಲಯಕ್ಕೆ ವಿದ್ಯಾರ್ಥಿಗಳು ಪಾವತಿಸಿರುತ್ತಾರೆ. ಪ್ರತಿ ವಿದ್ಯಾರ್ಥಿಗಳಿಂದ ಶುಲ್ಕ ಭರಿಸಿಕೊಂಡ ನಂತರವೂ ಸರಿಯಾದ ಅಂಕಪಟ್ಟಿ ದೊರೆಯುತ್ತಿಲ್ಲ.

ಪ್ರಸ್ತುತ ಅಂಕಪಟ್ಟಿ ಗಳನ್ನು ಸರಕಾರದ ಹಲವಾರು ದಾಖಲೆಗಳನ್ನು ಹೊಂದಿರುವ/ಪಡೆದುಕೊಳ್ಳಲು ಬಳಸುವ  ಡಿಜಿಲಾಕರ್ ತಂತ್ರಜ್ಞಾನದ ಮೂಲಕ ಪಡೆದುಕೊಳ್ಳಲು ವಿಶ್ವವಿದ್ಯಾನಿಲಯ ಸೂಚಿಸುತ್ತದೆ. ಆದರೆ ಈ ತಂತ್ರಜ್ಞಾನವು ಹಲವಾರು ಸಮಸ್ಯೆಗಳನ್ನು ಒಳಗೊಂಡಿದ್ದು, ವಿದ್ಯಾರ್ಥಿಗಳಿಗೆ ಸರಿಯಾಗಿ ಅಂಕಪಟ್ಟಿ ಗಳನ್ನು ಒದಗಿಸುವಲ್ಲಿ ವಿಫಲವಾಗಿದೆ.. ವಿದ್ಯಾರ್ಥಿಗಳ ಸಂಕ್ಷಿಪ್ತ ಅಂಕಗಳು, ಭಾವಚಿತ್ರ, ಸಂಬಂದಪಟ್ಟ ಅಧಿಕಾರಿಗಳ ಹಸ್ತಾಕ್ಷರ, ಪಠ್ಯ ವಿಷಯಗಳು ಮತ್ತು ಪ್ರೊಜೆಕ್ಟ್ ವಿಷಯಗಳು, ಮತ್ತು ಉತ್ತೀರ್ಣ-ಅನುತ್ತೀರ್ಣತೆಯ ಮಾನದಂಡಗಳನ್ನು ಹೊಂದಿಲ್ಲದ ಡಿಜಿಟಲ್ ಅಂಕಪಟ್ಟಿಗಳು ಕೇವಲ ಆನ್ಲೈನ್ ವ್ಯವಹಾರಗಳಿಗೆ ಸೀಮಿತವಾಗಿದೆ ಎಂಬ ಸೂಚನೆಯನ್ನು ಹೊಂದಿದೆ.

ಡಿಜಿಟಲ್ ಅಂಕಪಟ್ಟಿಯಲ್ಲಿ ನಮೂದಿಸಿರುವಂತೆ ಆ ಅಂಕಪಟ್ಟಗೆ ಮಾನ್ಯತೆ ಇರುವುದಿಲ್ಲ ಹಾಗೂ ವಿಶ್ವವಿದ್ಯಾಲಯದ ಅಂಕಪಟ್ಟಿಗೂ  ಡಿಜಿಟಲ್ ಅಂಕಪಟ್ಟಿಗೂ ವ್ಯತ್ಯಾಸ ಇರುವ ಸಾಧ್ಯತೆ ಇದೆ ಎಂಬ ಸ್ಪಷ್ಟ ಸೂಚನೆಗಳನ್ನು ನೀಡಿರುತ್ತಾರೆ. ಇಂತಹ ಹತ್ತು ಹಲವು ದೋಷಗಳನ್ನು ಒಳಗೊಂಡ ಡಿಜಿಟಲ್ ಅಂಕಪಟ್ಟಿ ಗಳನ್ನು ಯಾವುದೇ ಕಂಪನಿಗಳು ಉದ್ಯೋಗಕ್ಕೆ ಸಂಬಂಧಿಸಿದ ಪರಿಶೀಲನೆ ವೇಳೆ ಮಾನ್ಯ ಮಾಡುತ್ತಿಲ್ಲ, ವಿಶೇಷವಾಗಿ ಹೊರದೇಶಗಳಲ್ಲಿ ಕೆಲಸಕ್ಕೆ ಅರ್ಜಿ ಸಲ್ಲಿಸಲು ಭೌತಿಕ ಅಂಕಪಟ್ಟಿ  ಹಾಜರುಪಡಿಸುವುದು ಕಡ್ಡಾಯವಾಗಿದ್ದು ಈ ವೇಳೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.

ಇಂತಹ ತೊಡಕುಗಳು ಇರುವ ಡಿಜಿಟಲ್ ಅಂಕಪಟ್ಟಿ ಗಳನ್ನು ಕೊಡುವ ಬದಲಾಗಿ ಈ ಹಿಂದೆ ನೀಡುತ್ತಿದ್ದ ರೀತಿಯ ಭೌತಿಕ ಅಂಕಪಟ್ಟಿ ಗಳನ್ನು ನೀಡುವಂತೆ ಈ ಮೂಲಕ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸರಕಾರಕ್ಕೆ ಎಲ್ಲಾ ವಿದ್ಯಾರ್ಥಿಗಳ ಪರವಾಗಿ ವಿನಂತಿ.

RELATED ARTICLES
- Advertisment -
Google search engine

Most Popular