ಕಾರ್ಕಳ ಬಿಎಸ್ಸಿ ನರ್ಸಿಂಗ್ ಕಾಲೇಜಿನ ಅವ್ಯವಸ್ಥೆ ಸರಿಪಡಿಸಿ; ಪ್ರಾಂಶುಪಾಲರಿಗೆ ಎಬಿವಿಪಿ ಮನವಿ

0
123

ಕಾರ್ಕಳ: ಬಿಎಸ್ಸಿ ನರ್ಸಿಂಗ್ ಕಾಲೇಜಿನಲ್ಲಿ ಅನೇಕ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಕಳೆದ 4 ವರ್ಷಗಳಿಂದ ಅನುಭವಿಸುತ್ತಿದ್ದು, ಮೂಲ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಕಳ ವತಿಯಿಂದ ಪ್ರಾಂಶುಪಾಲರಿಗೆ ಮನವಿ ನೀಡಲಾಯಿತು.

ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಒಂದು ಸುಸಜ್ಜಿತ ಕಟ್ಟಡವಿಲ್ಲದೆ, ಕಾಲೇಜು ನಿರ್ವಹಣೆಗೆ ಬೇಕಾದ ಗುಮಾಸ್ತರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು, ಉಪನ್ಯಾಸಕರು, ತರಗತಿ ಕೊಠಡಿಗಳು, ಶೌಚಾಲಯ ವ್ಯವಸ್ಥೆಗಳು, ನರ್ಸಿಂಗ್ ವ್ಯಾಸಂಗಕ್ಕೆ ಬೇಕಾದ ಅತ್ಯಗತ್ಯ ಉಪಕರಣಗಳು ಹಾಗೂ ವಿದ್ಯಾಭ್ಯಾಸಕ್ಕೆ ಬೇಕಾದ ಸರಿಯಾದ ಪ್ರಯೋಗಾಲಯ, ಗ್ರಂಥಾಲಯ ವ್ಯವಸ್ಥೆ ಕಾಲೇಜಿನಲ್ಲಿ ಸರಿಯಾಗಿ ಇಲ್ಲ. , ವಿದ್ಯಾರ್ಥಿಗಳು ಸಮಸ್ಯೆಗಳ ಸರಮಾಲೆಯನ್ನು ಎದುರಿಸುತ್ತಿದ್ದಾರೆ. ಅದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಮಸ್ಯೆ ಆಗುತ್ತಿದ್ದು, ಇದಕ್ಕೆ ಸಂಬಂಧಿಸಿ ಕಾಲೇಜಿನ ಆಡಳಿತ ಮಂಡಳಿ ತಕ್ಷಣವೇ ಬಂದು ಸರಿಯಾದ ವ್ಯವಸ್ಥೆ ಮಾಡಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಒಂದು ಉತ್ತಮವಾದ ಅವಕಾಶ ಒದಗಿಸಬೇಕಾಗಿ ಎಬಿವಿಪಿ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ರಾಜ್ಯ ಸಹ ಕಾರ್ಯದರ್ಶಿಗಳಾದ ಗಣೇಶ್ ಪೂಜಾರಿ, ಉಡುಪಿ ಜಿಲ್ಲಾ ಸಂಚಾಲಕ ಶ್ರೇಯಸ್ ಅಂಚನ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here