Sunday, January 19, 2025
Homeರಾಜ್ಯಎಬಿವಿಪಿಯಿಂದ ನೇಹಾ ಹೀರೆಮಠ ಕೊಲೆ ಖಂಡಿಸಿ ಪಂಜಿನ ಮೆರವಣಿಗೆ

ಎಬಿವಿಪಿಯಿಂದ ನೇಹಾ ಹೀರೆಮಠ ಕೊಲೆ ಖಂಡಿಸಿ ಪಂಜಿನ ಮೆರವಣಿಗೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ವತಿಯಿಂದ ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಹಾಗೂ ಗೃಹ ಸಚಿವ ಪರಮೇಶ್ವರ ಅವರ ಹೇಳಿಕೆ ಖಂಡಿಸಿ ಕಾರ್ಕಳದ ಸರ್ವಜ್ಞ ವೃತ್ತದಿಂದ ಬಂಡೀಮಠದ ವರೆಗೆ ಪಂಜಿನ ಮೆರವಣಿಗೆ ನಡೆಸಿ ಆರೋಪಿಯ ಪ್ರತಿಕೃತಿಯನ್ನು ದಹಿಸಿ ಪ್ರತಿಭಟಿಸಲಾಯಿತು.

ರಾಜ್ಯ ಸಹ ಕಾರ್ಯದರ್ಶಿ ಹರ್ಶಿತ್ ಕೊಯ್ಲ ಮಾತನಾಡಿ ಶಾಲಾ ಕಾಲೇಜುಗಳು ಜ್ಞಾನದ ದೇಗುಲಗಳು ಇಂತಹ ದೇಗುಲದಲ್ಲಿ ಹಾಡು ಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಭೀಕರ ಹತ್ಯೆಯನ್ನು ಮಾಡಿರುವ ಘಟನೆ ನಿಜಕ್ಕೂ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದಂತಾಗಿದೆ. ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವಳನ್ನು ಜಿಹಾದಿ ಕ್ರೂರ ಮನಸ್ಥಿತಿಯ ಪಯಾಜ್ ಎಂಬಾತ ಲವ್ ಜಿಹಾದಿಗಾಗಿ ಅವಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಈ ಪ್ರೀತಿಯನ್ನು ವಿದ್ಯಾರ್ಥಿನಿ ನಿರಾಕರಿಸಿದಕ್ಕಾಗಿ ಆಕೆಯ ಕಾಲೇಜಿಗೆ ಆಕ್ರಮವಾಗಿ ಪ್ರವೇಶಿಸಿ ಚಾಕುವಿನಿಂದ 9 ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆಗಾರನಿಗೆ ಕಾನೂನಿನ ಯಾವುದೇ ಭಯವೂ ಇಲ್ಲದೆ ರಾಜಾರೋಷವಾಗಿ ಕ್ರತ್ಯ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರೆ ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಕುಸಿದು ಹೋಗಿದೆ ಎನ್ನುವುದು ಸ್ಪಷ್ಟವಾಗಿ ತಿಳಿಯುವಂತಾಗಿದೆ. ಈ ಘಟನೆಯಿಂದ ರಾಜ್ಯದ ವಿದ್ಯಾರ್ಥಿ ಸಮುದಾಯ ಭಯಭೀತ ಗೊಂಡಿದೆ. ಪೊಲೀಸರು ಕೂಡಲೇ ಸೂಕ್ತ ತನಿಖೆಯನ್ನು ಕೈಗೊಂಡು, ಅಪರಾಧಿಗೆ ಉಗ್ರ ಶಿಕ್ಷೆ ಆಗುವ ಹಾಗೆ ಮಾಡಿ ವಿದ್ಯಾರ್ಥಿನಿಯ ಕುಂಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕರಾದ ಗಣೇಶ್ ಪೂಜಾರಿ ಪಣಿಯಾಡಿ, ತಾಲೂಕು ಸಂಚಾಲಕರಾದ ಶ್ರೇಯಸ್ ಅಂಚನ್,ಕರ್ನಾಟಕ ದಕ್ಷಿಣ ಪ್ರಾಂತ ಸಾಮಾಜಿಕ ಜಾಲತಾಣ ಸಹ-ಸಂಚಾಲಕರಾದ ಶ್ರೀವತ್ಸ ಮತ್ತು ಪ್ರಮುಖರಾದ ಅಜಿತ್ ಜೋಗಿ, ಪವನ್, ಸ್ವಸ್ತಿಕ್, ಕಾರ್ತಿಕ್, ಮನೋಜ್ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಇದ್ದರು.

RELATED ARTICLES
- Advertisment -
Google search engine

Most Popular