ರಾಷ್ಟ್ರೀಯ ವಿದ್ಯಾರ್ಥಿ ದಿನದ ಅಂಗವಾಗಿ ಕುಂದಾಪುರದಲ್ಲಿ ಎಬಿವಿಪಿಯ ವಿಶೇಷ ಕಾರ್ಯಕ್ರಮ

0
10

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ತಾಲೂಕು ವತಿಯಿಂದ ರಾಷ್ಟ್ರೀಯ ವಿದ್ಯಾರ್ಥಿ ದಿನದ ಕಾರ್ಯಕ್ರಮವು ಕುಂದಾಪುರ ನಗರದ ಕಲಾಕ್ಷೇತ್ರ ಸಭಾಂಗಣದಲ್ಲಿ ನಡೆಯಿತು.ರಾಷ್ಟ್ರೀಯ ವಿದ್ಯಾರ್ಥಿ ದಿವಸದ ಅಂಗವಾಗಿ ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿ, ಸಾಮಾಜಿಕ ಹೊಣೆಗಾರಿಕೆ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುವ ಅಗತ್ಯವನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.

ಎಬಿವಿಪಿಯು ಕಳೆದ ಹಲವು ದಶಕಗಳಿಂದ ವಿದ್ಯಾರ್ಥಿಗಳ ಹಕ್ಕುಗಳ ರಕ್ಷಣೆ, ಶಿಕ್ಷಣದ ಗುಣಮಟ್ಟ ಹಾಗೂ ರಾಷ್ಟ್ರೀಯ ಮೌಲ್ಯಗಳ ಬೆಳವಣಿಗೆಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಮಾಜಮುಖಿ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಕರೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಎಬಿವಿಪಿ ಉಡುಪಿ ಜಿಲ್ಲಾ ಸಂಚಾಲಕರಾದ ರಂಜಿತ್ ಸಿದ್ದಾಪುರ ಹಾಗೂ ಕುಂದಾಪುರದ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here