ಶಿವಮೊಗ್ಗ: ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಮುದ್ದಿನಕೊಪ್ಪ ಟ್ರೀ ಪಾರ್ಕ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಗಾಯಗೊಂಡಿದ್ದು, ಒಬ್ಬ ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಆಯನೂರು ಕಡೆಯಿಂದ ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಚಿತ್ರದುರ್ಗದ ಸ್ವಿಫ್ಟ್ ಕಾರು ಹಾಗೂ ಶಿವಮೊಗ್ಗ ಕಡೆಯಿಂದ ಸಿಗಂದೂರಿಗೆ ಹೋಗುತ್ತಿದ್ದ ಇನೋವಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸ್ವಿಫ್ಟ್ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಓವರ್ ಟೇಕ್ ಮಾಡುವ ಭರದಲ್ಲಿ ಅವಘಡ ಸಂಭವಿಸಿದೆ ಎನ್ನಲಾಗಿದೆ.