ಲಾರಿ–ಸ್ಕೂಟಿ ನಡುವೆ ಅಪಘಾತ : ವ್ಯಕ್ತಿ ಮೃತ್ಯು

0
33

ಮಂಗಳೂರು: ಲಾರಿ ಮತ್ತು ಸ್ಕೂಟಿ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಬೈಕಂಪಾಡಿಯಲ್ಲಿ ನಡೆದಿದೆ.

ಮೃತರನ್ನು ಹಳೆಯಂಗಡಿ ಕದಿಕೆ ನಿವಾಸಿ ಇಮ್ತಿಯಾಝ್ (39) ಎಂದು ಗುರುತಿಸಲಾಗಿದೆ. ಇವರು ಶಿಪ್ಪಿಂಗ್ ಕಂಪೆನಿಯೊಂದರಲ್ಲಿ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಸೋಮವಾರ ಬೆಳಗ್ಗೆ ಪಣಂಬೂರಿನಲ್ಲಿರುವ ತಮ್ಮ ಲಾರಿ ಕಚೇರಿಗೆ ತೆರಳುತ್ತಿದ್ದ ವೇಳೆ ಬೈಕಂಪಾಡಿಯಲ್ಲಿ ಲಾರಿ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಇಮ್ತಿಯಾಝ್ ಗಂಭೀರವಾಗಿ ಗಾಯಗೊಂಡಿದ್ದರು.

ತಕ್ಷಣ ಸ್ಥಳೀಯ ಸಾರ್ವಜನಿಕರು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಪ್ರಯತ್ನಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಇಮ್ತಿಯಾಝ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.