Saturday, July 20, 2024
Homeಅಪಘಾತರಿಷಿಕೇಶ-ಬದರಿನಾಥ ಹೈವೇಯಲ್ಲಿ ಕಮರಿಗೆ ಉರುಳಿದ ಟೆಂಪೊ ಟ್ರಾವೆಲರ್:‌ 8 ಸಾವು

ರಿಷಿಕೇಶ-ಬದರಿನಾಥ ಹೈವೇಯಲ್ಲಿ ಕಮರಿಗೆ ಉರುಳಿದ ಟೆಂಪೊ ಟ್ರಾವೆಲರ್:‌ 8 ಸಾವು

ರುದ್ರಪ್ರಯಾಗ: ಟೆಂಪೊ ಟ್ರಾವೆಲರ್‌ ಒಂದು ಕಮರಿಗೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿ, 15 ಮಂದಿ ಗಾಯಗೊಂಡಿರುವ ಘಟನೆ ಉತ್ತರಾಖಂಡದ ರಿಷಿಕೇಶ-ಬದರಿನಾಥ ಹೆದ್ದಾರಿಯಲ್ಲಿ ನಡೆದಿದೆ. ಘಟನಾ ಸ್ಥಳದಲ್ಲಿ ಎಸ್‌ಡಿಆರ್‌ಎಫ್‌ ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ನಿರ್ವಹಿಸುತ್ತಿದ್ದಾರೆ.
ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಘಟನೆಯ ಕುರಿತು ಪ್ರತಿಕ್ರಿಯಿಸಿದ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ, ರುದ್ರಪ್ರಯಾಗ ಜಿಲ್ಲೆಯಲ್ಲಿ ಟೆಂಪೊ ಟ್ರಾವಲರ್‌ ಅಪಘಾತದ ಸುದ್ದಿ ಕೇಳಿ ಮನಸ್ಸಿಗೆ ದುಃಖವಾಗಿದೆ. ಪರಿಹಾರ ಕಾರ್ಯಗಳು ನಡೆಯುತ್ತಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗುತ್ತಿದೆ. ಘಟನೆಯ ಬಗ್ಗೆ ತನಿಖೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular