ಸೌದಿ ಅರೇಬಿಯಾದ ತಾಯಿಫ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಹಳೆಯಂಗಡಿ ಮೂಲದ ನಾಲ್ವರು ಮೃತಪಟ್ಟ ಘಟನೆ ನಡೆದಿದೆ.
ಕತಾರ್ ನಿಂದ ಸೌದಿ ಅರೇಬಿಯಾಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ತೆರಳುತ್ತಿದ್ದ ಹಳೆಯಂಗಡಿ ಮೂಲದ ದಂಪತಿ, 40 ದಿನದ ಹಸುಗೂಸು ಸೇರಿದಂತೆ ನಾಲ್ಕು ಮಂದಿ ಸ್ಥಳದಲ್ಲೇ ದುರ್ಮರಣಗೀಡಾಗಿದ್ದಾರೆ.
ಕಾರಿನಲ್ಲಿದ್ದ ಇನ್ನೊಂದು ಮಗು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳೆಯಂಗಡಿ ತೋಕೂರು ಸರಕಾರಿ ಶಾಲೆಯ ಪಕ್ಕದ ಕುಟುಂಬದ ಮೂಲ ಮನೆಯಲ್ಲಿ ನೀರವ ಮೌನ ನೆಲೆಸಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.