ಹುಣಸೂರು ಬಳಿ ನಡೆದ ಅಪಘಾತ : ಪುತ್ತೂರಿನ ಯುವಕ ಸಾವು

0
13

ಪುತ್ತೂರು : ಹುಣಸೂರು ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಪುತ್ತೂರು ತಾಲೂಕಿನ ಕಾವು ಮಾಡನ್ನೂರಿನ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ಕಾವು ಮಾಡನ್ನೂರು ನಿವಾಸಿ ಸುಲೈಮಾನ್ ಅವರ ಪುತ್ರ ಸಂಶುದ್ದೀನ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸಂಶುದ್ದೀನ್ ಅವರು ತಂದೆ, ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಯುವಕನ ಅಕಾಲಿಕ ನಿಧನದಿಂದ ಕುಟುಂಬಸ್ಥರು ಹಾಗೂ ಬಂಧು-ಬಳಗದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

ಮೃತರ ಅಂತಿಮ ಕಾರ್ಯವು ಆಗಸ್ಟ್ 28ರಂದು ಸಂಜೆ ಮಾಡನ್ನೂರು ಮಸೀದಿಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿದ್ದಾರೆ. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.