ಉದ್ಯಾವರ–ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ

0
116

ಉದ್ಯಾವರ: ಉದ್ಯಾವರದಿಂದ ಕಟಪಾಡಿ ಕಡೆಗೆ ತೆರಳುತ್ತಿದ್ದ KA-20-AC-1845 ನೋಂದಣಿಯ ನವದುರ್ಗ ಪ್ರಸಾದ್ ಎಕ್ಸ್‌ಪ್ರೆಸ್ ಬಸ್ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಮೇಲೆ ಹತ್ತಿದ ಘಟನೆ ನಡೆದಿದೆ.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಅಪಘಾತದ ಕುರಿತು ಟೋಲ್ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ಅವರು ಘಟನಾ ಸ್ಥಳಕ್ಕೆ ಆಗಮಿಸಿ ಕ್ರೇನ್ ತರಿಸಿ ಬಸ್ ತೆರವುಗೊಳಿಸುವಂತೆ ಸೂಚಿಸಿದ್ದಾರೆ.

ಘಟನಾ ಸ್ಥಳದಲ್ಲಿ ಸಿಬ್ಬಂದಿ ಹಾಜರಿದ್ದು, ಬಸ್ ತೆರವುಗೊಳಿಸುವ ಕಾರ್ಯದ ಜೊತೆಗೆ ಸುಗಮ ಸಂಚಾರಕ್ಕೆ ಅಗತ್ಯ ವ್ಯವಸ್ಥೆ ಮಾಡಲಾಗುತ್ತಿದೆ.