ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ

0
74

ಮೈಸೂರು : ನಂಜನಗೂಡು ತಾಲೂಕಿನ ಹೊಸಳ್ಳಿ ಗೇಟ್ ಬಳಿ ಚಲಿಸುತ್ತಿದ್ದ ವೇಳೆಯಲ್ಲೇ ಬೆಂಕಿ ಕಾಣಿಸಿಕೊಂಡು ಕೆಎಸ್‌ಆರ್‌ಟಿಸಿ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ನಡೆದಿದೆ. ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಸ್ಥಿತಿಯನ್ನು ಗಮನಿಸಿದ ಚಾಲಕ ತಕ್ಷಣವೇ ಬಸ್ಸನ್ನು ಹೊಸಳ್ಳಿ ಗೇಟ್ ಬಳಿ ನಿಲ್ಲಿಸಿ, ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಯಾಣಿಕರನ್ನು ಇಳಿಸಿದ ಕೆಲವೇ ನಿಮಿಷಗಳಲ್ಲಿ ಬೆಂಕಿ ವ್ಯಾಪಿಸಿ, ಬಸ್ ಸಂಪೂರ್ಣವಾಗಿ ಬೆಂಕಿ ಗಾಹುತಿಯಾಗಿದೆ.ಈ ಕುರಿತು ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ .

LEAVE A REPLY

Please enter your comment!
Please enter your name here