ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಫಘಾತ, ಸಂಸದ ಕೋಟರವರ ಅಧ್ಯಕ್ಷತೆಯಲ್ಲಿ ಇಲಾಖಾಧಿಕಾರಿಗಳೊಂದಿಗೆ ಸಭೆ

0
154

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯವರ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು (ಸೆ. 2) ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಸಭೆ ಜರಗಿತು.

ಸಭೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಮಂಜೂರಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸುಂತೆ ಜೊತೆಗೆ ಸಂಚಾರಕ್ಕೆ ಬದಲಿ ರಸ್ತೆ ಗುರುತಿಸುವಂತೆ ಮತ್ತು ಉಚ್ಚಿಲ ಹಾಗೂ ಪಡುಬಿದ್ರಿ ಜಂಕ್ಷನ್ ಬಳಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು ಇದರ ತಡೆಗೆ ಬೀದಿ ದೀಪ ಮತ್ತು ಬ್ಯಾರಿಗೇಟ್ ಅಳವಡಿಸುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಸಹಾಯಕ ಆಯುಕ್ತರಾದ ರಶ್ಮಿ, ಪೋಲಿಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್ ಹಾಗೂ ರಾಷ್ಟ್ರೀಯ ಹೆದ್ದಾರಿ ಗೆ ಸಂಬಂಧಿಸಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here