ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ದಸ್ತಗಿರಿ

0
43

ಮಂಗಳೂರು : ಪ್ರಕರಣವೊಂದರಲ್ಲಿ ಸುಮಾರು ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಂಗಳೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ದಸ್ತಗಿರಿಗೊಳಗಾದವನನ್ನು ಗುರುಪುರ–ವಾಮಂಜೂರು, ಉಳಾಯಿಬೆಟ್ಟು ನಿವಾಸಿ ಮೊಹಮ್ಮದ್ ಇಮ್ರಾನ್ (36) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ಕಲಂ 376, 506 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಿ.ಸಿ. ನಂ. 2225/2021ರ ವಿಚಾರಣೆ ನಡೆಯುತ್ತಿತ್ತು.

ಪ್ರಕರಣದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಮ್ರಾನ್ ವಿರುದ್ಧ ವಾರೆಂಟ್ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆಹಚ್ಚಿ ದಸ್ತಗಿರಿ ಮಾಡಿದ್ದಾರೆ.

ದಸ್ತಗಿರಿಯ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಆಗಸ್ಟ್ 24, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಇಮ್ರಾನ್ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣೆಗಳಲ್ಲಿಯೂ ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.