ಚಿಕ್ಕಮಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಆರೋಪದಡಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕು ವೈದ್ಯಾಧಿಕಾರಿ ಡಾ.ಉಮೇಶ್ ಮನೆ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಡಾ. ಉಮೇಶ್ 1995ರಲ್ಲಿ ವೈದ್ಯಾಧಿಕಾರಿಯಾಗಿ ಸೇವೆಗೆ ನೇಮಕವಾಗಿದ್ದು, 2023ರಿಂದ ಕಡೂರು ತಾಲೂಕು ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು 2020ರಿಂದ 2023ರವರೆಗೆ ಚಿಕ್ಕಮಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಸಲ್ಲಿಸಿದ್ದರು.
ಅವರು ಸೇವೆಗೆ ಸೇರಿದಲ್ಲಿಂದ ಇಲ್ಲಿಯವರೆಗೆ ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಕಾನೂನುಬದ್ಧ ಮೂಲ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಚಿರಾಸ್ಥಿ ಹಾಗೂ ಚರಾಸ್ಥಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪವಿದೆ. ಈ ಹಿನ್ನಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಆರೋಪ: ಕಡೂರು ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
RELATED ARTICLES