ಸುಳ್ಯ : ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಗ್ಯಾರೇಜ್‌ನಲ್ಲಿ ಇರಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಸುಳ್ಯ ಐವರ್ನಾಡು ನಿವಾಸಿ 30 ವರ್ಷದ ದಯಾನಂದ ಹಾಗೂ ಸುಳ್ಯ ಕಸಬಾ ನಿವಾಸಿ 23 ವರ್ಷದ ದರ್ಶನ ರಾಜು ಎಂದು ಗುರುತಿಸಲಾಗಿದೆ.
ಆಗಸ್ಟ್ 26ರಂದು ರಾತ್ರಿ ಅಂಬೆಟಡ್ಕದಲ್ಲಿರುವ ಗ್ಯಾರೇಜ್‌ನಲ್ಲಿ ನಿಲ್ಲಿಸಲಾಗಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಘಟನೆಯಲ್ಲಿ ಬೈಕ್ ಸುಟ್ಟು ಹಾನಿಗೊಳಗಾಗಿತ್ತು. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಬಳಿಕ ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

