ಪ್ರಬಂಧ ಸ್ಪರ್ಧೆಯಲ್ಲಿ ಅಮೃತಭಾರತಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

0
16

ಟಾಟಾ ಬಿಲ್ಡಿಂಗ್ ಇಂಡಿಯಾ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಅಮೃತಭಾರತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನ ಪ್ರಥಮ ಪಿಯುಸಿ ವಿಭಾಗದಲ್ಲಿ ಪ್ರಜ್ವಲ್ ಎಂ. ಶೆಟ್ಟಿ ಪ್ರಥಮ, ಗ್ರಂಥ ಎಸ್. ದ್ವಿತೀಯ ಹಾಗೂ ತನ್ವಿ ಎಂ. ಪೂಜಾರಿ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.

ದ್ವಿತೀಯ ಪಿಯುಸಿ ವಿಭಾಗದಲ್ಲಿ ವಿಘ್ನೇಶ್ ಪ್ರಥಮ, ದೀಪ್ತಿ ಭಟ್ ದ್ವಿತೀಯ ಹಾಗೂ ಅನಂತ ಶೆಣೈ ತೃತೀಯ ಬಹುಮಾನವನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.