ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ, ಕ್ಷೇತ್ರ ಸಂಪನ್ಮೂಲ ಕೇಂದ್ರ ಕಾರ್ಕಳ ಹಾಗೂ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆ ಕಾರ್ಕಳ ಇವರ ಸಹಯೋಗದೊಂದಿಗೆ ಸಾಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ 27 ವಿದ್ಯಾರ್ಥಿಗಳು ಪದಕಗಳನ್ನು ಗಳಿಸಿರುತ್ತಾರೆ.
ಇವರನ್ನು ಶಾಲಾ ಅಧ್ಯಕ್ಷರಾದ ಜೆಸಿ ಚಿತ್ತರಂಜನ್ ಶೆಟ್ಟಿಯವರು, ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯೋಪಾಧ್ಯಾಯಿನಿ ಸುರೇಖಾ ರಾಜ್ ರವರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದರು.