ರಾಜ್ಯ ಮಟ್ಟದ ಬೆಲ್ಟ್ ಕುಸ್ತಿಯಲ್ಲಿ ಕಾರ್ಕಳದ ಎಸ್ ವಿ ಟಿ ಯ ವಿದ್ಯಾರ್ಥಿನಿಯರ ಸಾಧನೆ

0
31

ಸಾರ್ವಜನಿಕ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ತ್ರಿಶಾ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶಯದಲ್ಲಿ ನಡೆದ ರಾಜ್ಯಮಟ್ಟದ ಬೆಲ್ಟ್ ಕುಸ್ತಿ ಸ್ಪರ್ಧೆಯಲ್ಲಿ ಎಸ್ ವಿ ಟಿ ವನಿತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆಯನ್ನು ಮಾಡಿರುತ್ತಾರೆ.

ಪ್ರಥಮ ವಾಣಿಜ್ಯ ವಿಭಾಗದ ಕು. ಅನ್ವಿತ ರಾಜ್ಯಮಟ್ಟದಲ್ಲಿ ಚಿನ್ನದ ಪದಕ ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ಕು. ರಕ್ಷಾ , ಕು. ನೇಹಾ ಕು.ಮೇಘನಾ ಬೆಳ್ಳಿಯ ಪದಕ ಹಾಗೂ ಪ್ರಥಮ ವಾಣಿಜ್ಯ ವಿಭಾಗದ ಕು. ಪ್ರೇಕ್ಷಾ ಇವರು ಕಂಚಿನ ಪದಕವನ್ನು ಜಯಿಸಿರುತ್ತಾರೆ.

ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ಹಿರಿಯ ಸಹ ಶಿಕ್ಷಕರು, ಉಪನ್ಯಾಸಕರು, ಅಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿರುತ್ತಾರೆ.

LEAVE A REPLY

Please enter your comment!
Please enter your name here