ಮಂಗಳೂರು: 11.08.2025ರಂದು ವಿಧಾನ ಪರಿಷತ್ತಿನ ಕಲಾಪದಲ್ಲಿ ವಿಧಾನ ಪರಿಷತ್ತಿನ ಶಾಸಕ ಐವನ್ ಡಿ ಸೋಜಾರವರು ಮಂಗಳೂರು ತಾಲೂಕಿನ ಮಹಾನಗರ ಪಾಲಿಕೆ ವ್ಯಾಪ್ತಿಯ ಕುಡುಪು ಪ್ರದೇಶದಲ್ಲಿ 110 ಕೆ ವಿ ಸಾಮರ್ಥ್ಯದ ಸಬಸ್ಟೇಷನ್ ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ಸದನದಲ್ಲಿ ಮಾನ್ಯ ಇಂಧನ ಸಚಿವರೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಮಾನ್ಯ ಇಂಧನ ಸಚಿವರಾದ ಕೆ.ಜೆ. ಜಾರ್ಜ್‌ರವರು ಆದಷ್ಟು ಬೇಗ ಮಾಡಿಕೊಡುವುದಾಗಿ ಭರವಸೆ ನೀಡಿದರು.
