ಬೆಂಗಳೂರು: ಹಿರಿಯ ನಟ ದ್ವಾರಕೀಶ್ ಅವರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಾಳೆ ಬೆಳಿಗ್ಗೆ ಏಳು ಗಂಟೆಯಿಂದ ಹನ್ನೊಂದು ಗಂಟೆ ವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಮಧ್ಯಾತಹ್ನದ ವೇಳೆಗೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ದ್ವಾರಕೀಶ್ ಪುತ್ರ ಯೋಗಿ ದ್ವಾರಕೀಶ್ ಹೇಳಿದ್ದಾರೆ.
ದ್ವಾರಕೀಶ್ ನಿಧನಕ್ಕೆ ಚಿತ್ರರಂಗದ ಗಣ್ಯರು, ರಾಜಕೀಯ ಗಣ್ಯರು ಸೇರಿದಂತೆ ಹಲವು ಪ್ರಮುಖರು ಸಂತಾಪ ಸೂಚಿಸಿದ್ದಾರೆ.