Saturday, February 15, 2025
Homeಸಿನಿಮಾನಟ ನಾಗಾರ್ಜುನಗೆ ಬಿಗ್ ರಿಲೀಫ್ | ಎನ್ ಕನ್ವೆನ್ಷನ್ ಸೆಂಟರ್ ಕಟ್ಟಡ ತೆರವಿಗೆ ಹೈಕೋರ್ಟ್‌ ತಡೆ

ನಟ ನಾಗಾರ್ಜುನಗೆ ಬಿಗ್ ರಿಲೀಫ್ | ಎನ್ ಕನ್ವೆನ್ಷನ್ ಸೆಂಟರ್ ಕಟ್ಟಡ ತೆರವಿಗೆ ಹೈಕೋರ್ಟ್‌ ತಡೆ

ತೆಲುಗು ನಟ ನಾಗಾರ್ಜುನಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ನಾಗಾರ್ಜುನ ಒಡೆತನದ ಕನ್ವೆನ್ಷನ್ ಸೆಂಟರ್ ಕೆಡವದಂತೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಹೈದರಾಬಾದ್‌ನ ಮದಾಪುರದಲ್ಲಿರುವ ಎನ್ ಕನ್ವೆನ್ಷನ್ ಸೆಂಟರ್ ಕೆಲ ಭಾಗಗಳನ್ನು ಇಂದು (ಆ.24) ಹೈಡ್ರಾ (HYDRA) ಅಧಿಕಾರಿಗಳು ಧ್ವಂಸಗೊಳಿಸಿದ್ದಾರೆ. ವಿವಾದ ಕೋರ್ಟ್‌ನಲ್ಲಿದ್ದರೂ ನೋಟಿಸ್ ನೀಡದೇ ತೆರವು ಮಾಡಲಾಗಿದೆ ಎಂದು ನಾಗಾರ್ಜುನ ಮತ್ತೆ ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದು, ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಅಂದ ಹಾಗೆ, ಅಕ್ಕಿನೇನಿ ನಾಗಾರ್ಜುನ ಅವರ ಎನ್ ಕನ್ವೆನ್ಷನ್ ಹಾಲ್ ಅನ್ನು ಇಂದು (ಆ.24) ನೆಲಸಮಗೊಳಿಸಲಾಗಿದೆ. ಸಾರ್ವಜನಿಕ ಭೂಮಿಯನ್ನು ಅತಿಕ್ರಮಿಸಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದಕ್ಕೆ ಹೈಡ್ರಾ (ಹೈದರಾಬಾದ್ ವಿಪತ್ತು ಪ್ರತಿಕ್ರಿಯೆ ಮತ್ತು ಆಸ್ತಿಗಳ ಮೇಲ್ವಿಚಾರಣೆ ಮತ್ತು ರಕ್ಷಣೆ ಸಂಸ್ಥೆ) ಸಂಸ್ಥೆ ಶನಿವಾರ ಆಸ್ತಿಯನ್ನು ನೆಲಸಮಗೊಳಿಸಿದೆ.

ಅಕ್ಕಿನೇನಿ ನಾಗಾರ್ಜುನ ಅವರು ತಮ್ಮ ಎಕ್ಸ್ ಖಾತೆಯಲ್ಲಿ, ಈ ವಿಚಾರಕ್ಕೆ ಸಂಬಂಧಿಸಿದಂತೆ ಪೋಸ್ಟ್ ಮಾಡಿದ್ದಾರೆ. ಕಾನೂನು ಉಲ್ಲಂಘಿಸುವ ಯಾವುದೇ ತಪ್ಪನ್ನು ನಾನು ಮಾಡಿಲ್ಲ. ವಿವಾದ ಕೋರ್ಟ್‌ನಲ್ಲಿದ್ದರೂ ತೆರವು ಮಾಡಲಾಗಿದೆ. ನನ್ನ ವಿರುದ್ಧ ಆದೇಶ ಬಂದಿದ್ದರೆ ನಾನೇ ತೆರವು ಮಾಡಿಕೊಳ್ಳುತ್ತಿದ್ದೆ. ಆದರೆ ತೆರವುಗೊಳಿಸಿರುವುದು ಅತೀವ ನೋವನ್ನುಂಟು ಮಾಡಿದೆ. ಇದಕ್ಕೆ ಸಂಬಂಧಿಸಿದಂತೆ ನಾನು ನ್ಯಾಯಾಲಯದಿಂದ ಸೂಕ್ತ ಪರಿಹಾರವನ್ನು ಕೋರುತ್ತೇವೆ ಎಂದು ಬರೆದುಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular