ಮೂಡುಬಿದಿರೆ: ಕನ್ನಡ ಚಿತ್ರರಂಗದ ಜನಪ್ರಿಯ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಸೆ. 19 ಶುಕ್ರವಾರದಂದು ಮೂಡುಬಿದಿರೆಗೆ ಆಗಮಿಸಲಿದ್ದಾರೆ.
ಮಧ್ಯಾಹ್ನ 2 ಗಂಟೆಯಿಂದ ಸಮಾಜ ಮಂದಿರದಲ್ಲಿ ಅವರೊಂದಿಗೆ ಮುಕ್ತ ಸಂವಾದ ನಡೆಯಲಿದ್ದು , ಸಾಮಾಜಿಕ ಹೋರಾಟಗಾರರು, ಸಾಮಾಜಿಕ ಚಿಂತಕರು, ವಿವಿಧ ಸಂಘಟನೆಗಳ ಸದಸ್ಯರು ಈ ಸಂವಾದದಲ್ಲಿ ಪಾಲ್ಗೊಳ್ಳುವಂತೆ ಸಂಘಟಕರು ವಿನಂತಿಸಿದ್ದಾರೆ.

