ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

0
190


ಉಡುಪಿ: ಜಾತಿ&ಧರ್ಮಗಳ ಭೇದವಿಲ್ಲದೆ ಮನಸ್ಸುಗಳನ್ನು ಕಟ್ಟಿಕೊಡುವ ಕೆಲಸವನ್ನು ಶಿಕ್ಷಕರು ಮಾಡಬೇಕು. ಇದರಿಂದ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು ಶಾಸಕ ಗುರ್ಮೆ ಸುರೇಶ್​ ಶೆಟ್ಟಿ ಹೇಳಿದರು.
ಭಾನುವಾರ ಅಲೆವೂರು ಆದರ್ಶ ಸಮೂಹ ವಿದ್ಯಾಸಂಸ್ಥೆಗಳ ಸಂಕೀರ್ಣದಲ್ಲಿ ಆದರ್ಶ ಚಾರಿಟೇಬಲ್​ ಟ್ರಸ್ಟ್​, ಉಡುಪಿ, ಆದರ್ಶ ಕಾಲೇಜ್​ ಆಫ್​ ನರ್ಸಿಂಗ್​, ಆದರ್ಶ ಇನ್ಸ್ಟಿಟ್ಯೂಟ್​ ಆಫ್​ ಅಲೈಡ್​ ಹೆಲ್ತ್​ ಸೈನ್ಸಸ್​, ಆದರ್ಶ ಪ್ಯಾರಮೆಡಿಕಲ್​ ಕಾಲೇಜು, ಆದರ್ಶ ಆಸ್ಪತ್ರೆ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾದ ಶಿಕ್ಷಕರ ದಿನಾಚರಣೆ ಮತ್ತು ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಸರ್ಕಾರಿ, ಅನುದಾನಿತ, ಅನುದಾನ ರಹಿತ ವಲಯಗಳ 30 ಶಿಕ್ಷಕರಿಗೆ ಹಾಗೂ ಸಿಬಿಎಸ್​ಇ ಶಾಲೆಗಳ 6 ಶಿಕ್ಷಕರಿಗೆ “ಆದರ್ಶ ಶಿಕ್ಷಕ’ ಪ್ರಶಸ್ತಿ ನೀಡಲಾಯಿತು.

ಮಾಜಿ ಸಚಿವ ಪ್ರಮೋದ್​ ಮಧ್ವರಾಜ್​, ಅಲೆವೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಯತೀಶ್​ ಕುಮಾರ್​, ಅಪರ ಜಿಲ್ಲಾಧಿಕಾರಿ ಅಬಿದ್​ ಗದ್ಯಾಳ್​, ಆದರ್ಶ ಆಸ್ಪತ್ರೆಯ ವೈದ್ಯಕಿಯ ನಿರ್ದೇಶಕ ಡಾ. ಚಂದ್ರಶೇಖರ್​, ಆದರ್ಶ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಮಲಾ ಚಂದ್ರಶೇಖರ್​, ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷ ಅಶೋಕ್​ಕುಮಾರ್​ ಕೊಡವೂರು, ಉಡುಪಿ ಎಪಿಐ ಅಧ್ಯಕ್ಷ ಡಾ.ಸುರೇಶ ಹೆಗ್ಡೆ, ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಲೋಕೇಶ್​ ಸಿ., ಆಸ್ಪತ್ರೆಯ ನಿರ್ದೇಶಕ ಡಾ.ಸುಹಾಸ್​ ಜಿ.ಸಿ., ಕಾಲೇಜಿನ ಪ್ರಾಂಶುಪಾಲೆ ಸುದೀನಾ, ಇನ್​ಸ್ಟಿಟ್ಯೂಟ್​ನ ಪ್ರೊ.ರವಿಕುಮಾರ್​ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here