ಮಂಗಳೂರು : ಗ್ರಾಮೀಣ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಬಾಲಕರಿಗೆ ಉತ್ತಮ ಶಿಕ್ಷಣ ಹಾಗೂ ಸಂಸ್ಕಾರಯುತ ಜೀವನ ನೀಡುವ ಉದ್ದೇಶದಿಂದ ಶ್ರೀ ರಾಮಕೃಷ್ಣ ಮಿಷನ್ ಬಾಲಕಾಶ್ರಮದಲ್ಲಿ ಹೊಸ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ.
ಆಶ್ರಮಕ್ಕೆ ಬಂದ ಅರ್ಜಿಗಳನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ನಂತರ ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ ನಡೆಸಲಾಗುತ್ತದೆ. ಈ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮಾತ್ರ ದೂರವಾಣಿ ಮೂಲಕ ಮಾಹಿತಿ ನೀಡಲಾಗುತ್ತದೆ ಎಂದು ಆಶ್ರಮದ ಆಡಳಿತ ಮಂಡಳಿ ತಿಳಿಸಿದೆ. ಪ್ರವೇಶ ಪಡೆದ ವಿದ್ಯಾರ್ಥಿಗಳು ಆಶ್ರಮದ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗಿರುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.
ಬಾಲಕರ ಶೈಕ್ಷಣಿಕ ಪ್ರಗತಿಯ ಜೊತೆಗೆ ಶಿಸ್ತು, ನೈತಿಕ ಮೌಲ್ಯಗಳು, ಯೋಗ, ಧ್ಯಾನ, ಕ್ರೀಡೆ ಹಾಗೂ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಿಗೆ ಆಶ್ರಮದಲ್ಲಿ ವಿಶೇಷ ಒತ್ತು ನೀಡಲಾಗುತ್ತದೆ. ಇದರ ಮೂಲಕ ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನಗೊಳಿಸುವುದೇ ಆಶ್ರಮದ ಮುಖ್ಯ ಧ್ಯೇಯವಾಗಿದೆ.
ಗ್ರಾಮೀಣ ಹಿನ್ನೆಲೆಯ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಶಿಕ್ಷಣ ಹಾಗೂ ಮೌಲ್ಯಾಧಾರಿತ ಜೀವನದತ್ತ ಹೆಜ್ಜೆ ಇಡಬೇಕೆಂದು ಶ್ರೀ ರಾಮಕೃಷ್ಣ ಮಿಷನ್ ಬಾಲಕಾಶ್ರಮದ ಆಡಳಿತ ಮಂಡಳಿ ಮನವಿ ಮಾಡಿದೆ.
ಅರ್ಜಿ ಸಲ್ಲಿಸ ಬಯಸುವವರಿಗೆ ಸೂಚನೆಗಳು:
7 ನೇ ತರಗತಿಯಲ್ಲಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ, ಗಂಡು ಮಕ್ಕಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
8 ನೇ ತರಗತಿಗೆ ಮಾತ್ರ ಪ್ರವೇಶ.
*ಮೊದಲ ಆದ್ಯತೆಯನ್ನು ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕಾಸರಗೂಡು ಜಿಲ್ಲೆಯ ವಿದ್ಯಾರ್ಥಿಗಳಿಗೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 25 ಆದಿತ್ಯವಾರ, 2026.
ಹೆಚ್ಚಿನ ಮಾಹಿತಿಗಾಗಿ ಹಾಗೂ ನಿಯಮಾವಳಿ ಪ್ರತಿಗಾಗಿ ಸಂಪರ್ಕಿಸಿ , Email: rkmbalakashrama@gmail.com, ಪೋನ್: 0824-241 4216, 9019629023
ಸಮಯ: ಬೆಳಿಗ್ಗೆ 8 ರಿಂದ 10 ರವರೆಗೆ ಮತ್ತು ಸಂಜೆ 4 ರಿಂದ 6.00 ಗಂಟೆಯವರೆಗೆ.

