ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ನ್ಯಾಯವಾದಿ ರಾಘವೇಂದ್ರ ಯಚ್.ವಿ.

0
4

2026-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

ಮಂಗಳೂರು : 90 ವರ್ಷಗಳ ಇತಿಹಾಸ ಹೊಂದಿರುವ ಪ್ರತಿಷ್ಠಿತ ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘದ 2026-28ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಗಸ್ಟ್ 16ರಂದು ನಡೆದ ಮಹಾಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಶ್ರೀ ಯಚ್. ವಿನಯ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಸಂಘದ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ರಾಘವೇಂದ್ರ ಯಚ್.ವಿ. ಅವರನ್ನು ಆಯ್ಕೆ ಮಾಡಲಾಯಿತು.

ಸಂಘದ ಉಪಾಧ್ಯಕ್ಷರಾಗಿ ಪ್ರಕಾಶ್ ಎಸ್. ಕರ್ಕೇರ ಹಾಗೂ ಸಾವಿತ್ರಿ ಯಚ್. ಭಟ್, ಕಾರ್ಯದರ್ಶಿಯಾಗಿ ಶ್ರೀನಿವಾಸ ಕುಳಾಯಿ ಆಯ್ಕೆಯಾಗಿದ್ದಾರೆ. ಜೊತೆ ಕಾರ್ಯದರ್ಶಿಗಳಾಗಿ ಯೋಗೀಶ್ ಸನಿಲ್ ಕುಳಾಯಿ ಹಾಗೂ ಶೋಭಾ ಆರ್. ರಾವ್, ಕೋಶಾಧಿಕಾರಿಯಾಗಿ ದಿವಸ್ಪತಿ ಹಾಗೂ ಆಂತರಿಕ ಲೆಕ್ಕ ಪರಿಶೋಧಕರಾಗಿ ಶ್ರೀಧರ ಯಚ್. ಅವರನ್ನು ಆಯ್ಕೆ ಮಾಡಲಾಗಿದೆ.

ಸ್ಥಾನ ನಿಮಿತ್ತ ಸದಸ್ಯರಾಗಿ ಗೋಪಾಲ ವಿ., ಡಾ. ಶಶಿಕುಮಾರ್ ಕೆ.ಸಿ., ಶಾಂತಾ, ಪಿ. ಲಕ್ಷ್ಮೀ ಹಾಗೂ ಹರೀಶ ಆಚಾರ್ ಅವರನ್ನು ಆಯ್ಕೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಕಾರ್ಯಕಾರಿ ಸಮಿತಿಯ ಸದಸ್ಯರನ್ನೂ ಆಯ್ಕೆ ಮಾಡಲಾಯಿತು.

90 ವರ್ಷಗಳ ಸುದೀರ್ಘ ಪರಂಪರೆ ಹೊಂದಿರುವ ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘವು ಹಳೆಯ ವಿದ್ಯಾರ್ಥಿಗಳನ್ನು ಸಂಘಟಿಸುವುದು, ಶೈಕ್ಷಣಿಕ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವುದು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ನೂತನ ಪದಾಧಿಕಾರಿಗಳ ನೇತೃತ್ವದಲ್ಲಿ ಸಂಘವು ಇನ್ನಷ್ಟು ಚಟುವಟಿಕೆಗಳನ್ನು ಹಮ್ಮಿಕೊಂಡು ಹೊಸ ಮೈಲುಗಲ್ಲುಗಳನ್ನು ಸ್ಥಾಪಿಸುವ ನಿರೀಕ್ಷೆ ವ್ಯಕ್ತವಾಗಿದೆ.