ಸಾವೊ ಪೌಲೊ: ಬ್ರೆಝಿಲ್‌ನಲ್ಲಿ ಭಾರೀ ವಿಮಾನ ದುರಂತವೊಂದು ಸಂಭವಿಸಿದ್ದು, ವಿಮಾನದಲ್ಲಿದ್ದ ಎಲ್ಲಾ 61 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ವಿಮಾನ ಆಕಾಶದಲ್ಲೇ ಗಿರಕಿ ಹೊಡೆದು ವೇಗವಾಗಿ ನೆಲಕ್ಕೆ ಅಪ್ಪಳಿಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಸ್ಕಾವೇಲ್ ನಗರದಿಂದ ಸಾವೊ ಪೌಲೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ವೊಯೆಪಾಸ್ ಏರ್‌ಲೈನ್ಸ್ ಎಟಿಆರ್-72 ವಿಮಾನ ವಿನೆದೊ ನಗರದ ಜನವಸತಿ ಪ್ರದೇಶದಲ್ಲಿ ಶುಕ್ರವಾರ ಪತನಗೊಂಡಿದೆ. ವಿಮಾನದಲ್ಲಿ 57 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯಿದ್ದರು. ದುರಂತದಲ್ಲಿ ಯಾರೂ ಬದುಕುಳಿದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನ ಬಿದ್ದು ಒಂದು ವಸತಿ ಪ್ರದೇಶಕ್ಕೆ ಹಾನಿಯಾಗಿದೆ. ಆದರೆ ಪ್ರದೇಶದ ಯಾವುದೇ ನಾಗರಿಕರ ಸಾವು ನೋವು ಆಗಿಲ್ಲ.
ವಿಮಾನದ ಪೈಲಟ್ ವಿಮಾನ ಮನೆಗಳ ಮೇಲೆ ಬೀಳುವುದನ್ನು ಬಹುತೇಕ ತಪ್ಪಿಸಿದ್ದಾರೆ ಎಂದು ಪ್ರಾಥಮಿಕವಾಗಿ ಕಂಡುಬಂದಿದೆ. ಗಿರಕಿ ಹೊಡೆಯುತ್ತಾ ವಿಮಾನ ಪತನವಾಗಿರುವ ಬಗ್ಗೆ ವಿಮಾನಯಾನ ತಜ್ಞರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಹವಾಮಾನ ವೈಪರೀತ್ಯದಿಂದಾಗಿ ಪೈಲಟ್ ಎಂಜಿನ್ ಮೇಲೆ ನಿಯಂತರಣ ಕಳೆದುಕೊಂಡಿದ್ದಿರಬಹುದು ಎಂದು ಶಂಕಿಸಲಾಗಿದೆ.
ವಿಡಿಯೋ ವೀಕ್ಷಿಸಲು ಲಿಂಕ್ ಕ್ಲಿಕ್ ಮಾಡಿ…