ವೃಷ್ಚಿಕ ಸಂಕ್ರಮಣ ಪ್ರಯುಕ್ತ ನ.16ರಂದು ಅಳದಂಗಡಿಯಲ್ಲಿ ಅಗೇಲು ಸೇವೆ

0
21

ಅಳದಂಗಡಿ: ವೃಷ್ಚಿಕ ಸಂಕ್ರಮಣದ ಪ್ರಯುಕ್ತ ನವೆಂಬರ್ 16ರ ಸೋಮವಾರ ಅಳದಂಗಡಿಯ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದಲ್ಲಿ ಅಗೇಲು ಸೇವೆ ನಡೆಯಲಿದೆ.

ಈ ಸಂದರ್ಭದಲ್ಲಿ ಮಧ್ಯಾಹ್ನ ಅನ್ನಸಂತರ್ಪಣೆಯ ವ್ಯವಸ್ಥೆ ಮಾಡಲಾಗಿದೆ. ಕ್ಷೇತ್ರದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅಗೇಲು ಸೇವೆಯಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಶಿವಪ್ರಸಾದ್ ಅಜಿಲರು ವಿನಂತಿಸಿದ್ದಾರೆ.