ಕೃಷಿ ಸಂಕಷ್ಟ, ತಂತ್ರಜ್ಞಾನದ ಹೆಜ್ಜೆ ಹಾಗೂ ರಾಜಕೀಯ ಬೆಳವಣಿಗೆಗಳು

0
11

​ರಾಜ್ಯಾದ್ಯಂತ ತೀವ್ರಗೊಂಡ ಬರ ವೀಕ್ಷಣೆ

ರಾಜ್ಯದ ಹಲವೆಡೆ ಬರ ಪರಿಸ್ಥಿತಿ ಎದುರಾಗಿದ್ದು, ಮುಖ್ಯಮಂತ್ರಿಗಳ ಸೂಚನೆಯಂತೆ ಸಚಿವರು ಜಿಲ್ಲೆಗಳಿಗೆ ತೆರಳಿ ವೀಕ್ಷಣೆ ನಡೆಸುತ್ತಿದ್ದಾರೆ. ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ಸಚಿವ ಅವರು ಭೇಟಿ ನೀಡಿ ಒಣಗುತ್ತಿರುವ ಬೆಳೆಗಳನ್ನು ಪರಿಶೀಲಿಸಿದರು. ಬೆಳೆ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ಮತ್ತು ನೆರವು ನೀಡಲಾಗುವುದು ಎಂದರು ಎಂದು ವರದಿಯಾಗಿದೆ.

​ಮತದಾರರ ಪಟ್ಟಿ ಪರಿಷ್ಕರಣೆಗೆ ಆಕ್ಷೇಪ:-

ವಿಶೇಷ ತೀವ್ರ ಪರಿಷ್ಕರಣೆ ಮೂಲಕ ರಾಜ್ಯದಲ್ಲಿ 1 ಕೋಟಿಗೂ ಹೆಚ್ಚು ಅರ್ಹ ಮತದಾರರನ್ನು ಪಟ್ಟಿಯಿಂದ ಅಳಿಸಲು ಯತ್ನಿಸಲಾಗುತ್ತಿದೆ ಎಂದು ಕೆಪಿಸಿಸಿ ವಕ್ತಾರರು ಆರೋಪಿಸಿದ್ದು,

ಯಾವುದೇ ಅರ್ಹ ಮತದಾರರು ಹೊರಗುಳಿಯದಂತೆ ನೋಡಿಕೊಳ್ಳಲು ಚುನಾವಣಾ ಆಯೋಗವನ್ನು ಆಗ್ರಹಿಸಿದ್ದಾರೆ.

​ವಿಜ್ಞಾನ ಆಧಾರಿತ ಕೃಷಿ ಮತ್ತು ನೂತನ ತಂತ್ರಜ್ಞಾನ:-

ಸರಕಾರವು ಕೃಷಿ ಕ್ಷೇತ್ರದಲ್ಲಿ ಉಪಗ್ರಹ ಚಿತ್ರೀಕರಣ, ಡ್ರೋನ್ ಹಾಗೂ ಕೃತಕ ಬುದ್ಧಿಮತ್ತೆ (AI) ಬಳಸಿ ನಿಖರ ಬೆಳೆ ದತ್ತಾಂಶ ಸಂಗ್ರಹಿಸಲು ನಿರ್ಧರಿಸಿದೆ.

ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಬೇಡಿಕೆ ಆಲಿಸಿದ ಸಚಿವರು ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ತಿಳಿಸಿದರು.

​ಬೆಂಗಳೂರಿನಲ್ಲಿ ನೂತನ ಉದ್ಯಾನಗಳು:-

ಮುಖ್ಯಮಂತ್ರಿಗಳು ಮಾತನಾಡಿ, ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿಯ ಮೂರು ನೂತನ ಉದ್ಯಾನವನಗಳನ್ನು ನಿರ್ಮಿಸಲು ಚಿಂತನೆ ನಡೆಸಲಾಗಿದೆ ಎಂದಿದ್ದಾರೆ ಎಂಬುದಾಗಿ ವರದಿ ಲಭಿಸಿದೆ.

ವರದಿ : ಮಂದಾರ ರಾಜೇಶ್‌