ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಕೃಷಿ ಉತ್ತೇಜನ ಅಭಿಯಾನ ಹೋ…. ಬೇಲೆ….. ಜುಲೈ 13 ರಂದು ಬೋಳ ಗ್ರಾಮದಲ್ಲಿ, ಕಾರ್ಕಳ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿರುವ ಸತೀಶ್ ಪೂಜಾರಿ ಅವರ ಮನೆಯ ಗದ್ದೆಯಲ್ಲಿ ನಡೆಯಲಿದೆ, ಗ್ರಾಮೀಣ ಪ್ರದೇಶದಲ್ಲಿ ಭತ್ತದ ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಕಳ ಮಂಡಲದ ವತಿಯಿಂದ ನಡೆಯಲಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿವಿನಯ ಡಿ. ಬಂಗೇರ ಜುಲೈ 10ರಂದು ವಿಕಾಸ ಜನಸೇವಾ ಕಚೇರಿಯಲ್ಲಿ ಮಧ್ಯಾಹ್ನ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ಕ್ಷೇತ್ರದ ಶಾಸಕರಾದ ವಿ ಸುನಿಲ್ ಕುಮಾರ್, ಕ್ಷೇತ್ರಾಧ್ಯಕ್ಷರಾದ ನವೀನ್ ನಾಯಕ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಸಂಧ್ಯಾ ರಮೇಶ್, ಬಿಜೆಪಿಯ ಹಿರಿಯರಾದ ಬೋಳ ಪ್ರಭಾಕರ್ ಕಾಮತ್ ಹಾಗೂ ಹಿರಿಯರು, ನ್ಯಾಯವಾದಿಗಳಾದ ಎಮ್ ಕೆ ವಿಜಯಕುಮಾರ್, ಜಿಲ್ಲೆಯ ಹಾಗೂ ಮಂಡಲದ ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಲಿರುವರು.
ಬೋಳ ಗ್ರಾಮಕ್ಕೆ ಅಂದು ಬೆಳಿಗ್ಗೆ 8.30ಕ್ಕೆ ಶಾಸಕರ ವಿಕಾಸ ಕಚೇರಿಯಿಂದ ವಾಹನದ ವ್ಯವಸ್ಥೆಯನ್ನು ಮಾಡಲಾಗಿದ್ದು, ಮಹಿಳಾ ಮೋರ್ಚಾದ ಸದಸ್ಯೆಯರು ಮತ್ತು ಶಕ್ತಿಕೇಂದ್ರ ಅಧ್ಯಕ್ಷರು ಇದರ ಪ್ರಯೋಜನ ಪಡೆಯಬೇಕು ಮತ್ತು ಹೆಚ್ಚುವರಿ ವಾಹನದ ವ್ಯವಸ್ಥೆ ಬೇಕಾದವರು ಕೂಡಲೇ ಶಕ್ತಿ ಕೇಂದ್ರ ಅಧ್ಯಕ್ಷರು ಅಥವಾ ಮಹಿಳಾ ಮೋರ್ಚಾ ಪದಾಧಿಕಾರಿಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಬಿಜೆಪಿಯ ಎಲ್ಲಾ ಮಹಿಳಾ ಕಾರ್ಯಕರ್ತರು, ಎಲ್ಲಾ ಸ್ತರದ ಪದಾಧಿಕಾರಿಗಳು, ಹಾಲಿ-ಮಾಜಿ ಜನಪ್ರತಿನಿಧಿಗಳು ಮತ್ತು ತಾಲೂಕಿನ ವಿವಿಧ ಮೋರ್ಚಾದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸುವರು ಮತ್ತು ಎಲ್ಲರಿಗೂ ಆತ್ಮೀಯ ಆಮಂತ್ರಣವನ್ನು ಕೋರಿರುತ್ತಾರೆ.