ಮೂಡುಬಿದಿರೆ: ಹೊಸದಾಗಿ ಬಂದಿರುವ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಪತ್ರಿಕಾರಂಗಕ್ಕೆ ಸವಾಲು. ಈ ತಂತ್ರಜ್ಞಾನ ಇಂದು ವರದಿಗಾರ, ಸಂಪಾದಕ, ನಿರೂಪಕನ ಕಾರ್ಯವನ್ನು ನಿರ್ವಹಿಸುತ್ತಿದೆ ಎಂದು ಮಿಜಾರಿನ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕ ಗಣೇಶ್ ಕೆ. ಹೇಳಿದರು. ಕೃತಕ ಬುದ್ಧಿಮತ್ತೆ ತಂತ್ರಜ್ಞಾನದೊಂದಿಗೆ ಸಾಗುವುದು ಇಂದಿನ ಅನಿವಾರ್ಯ ಎಂದು ಅವರು ತಿಳಿಸಿದರು.
ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಕಂಪ್ಯೂಟರ್ ಪ್ರಯೋಗಾಲಯದಲ್ಲಿ ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಅಭಿವ್ಯಕ್ತಿ ವೇದಿಕೆ ಹಮ್ಮಿಕೊಂಡಿದ್ದ `ನೆಕ್ಸ್ಟ್ ಜೆನ್ ಜರ್ನಲಿಸಂ’ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದ ಸಹ ಪ್ರಾಧ್ಯಾಪಕ ಶ್ರೀನಿವಾಸ್ ಒಡೆಯಾಲ, ಸಹಾಯಕ ಪ್ರಾಧ್ಯಾಪಕ ನಿಶಾನ್ ಕೋಟ್ಯಾನ್, ಅಭಿವ್ಯಕ್ತಿ ವೇದಿಕೆಯ ವಿದ್ಯಾರ್ಥಿ ಸಂಯೋಜಕ ವೈಶಾಕ್ ಮಿಜಾರ್ ಭಾಗವಹಿಸಿದ್ದರು.