ಪುತ್ತೂರು ದರ್ಬೆಯಲ್ಲಿ ಗಲಾಬೆ ನಡೆಸಿದ ಗುಂಡಾಗಳ ಮೇಲೆ ಗೂಂಡ ಕಾಯ್ದೆ ಹಾಕಿ ಬಂಧಿಸಿ ಅಜಯ್ ದೀಕ್ಷಿತ್ ಶೆಟ್ಟಿ

0
12

ಪುತ್ತೂರು ದರ್ಬೆ: ಅಂಗಡಿ ನಡೆಸುತ್ತಿದ್ದ ಹಿಂದೂ ಸಮುದಾಯದ ಮಹಿಳೆ ಹಾಗೂ ಅವರ ಪತಿಗೆ ಮುಸ್ಲಿಂ ಸಮುದಾಯದವರು ಹಲ್ಲೆ ನಡೆಸಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಘಟನೆ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಆರೋಪಿಗಳು ಪೊಲೀಸ್ ಜೀಪ್‌ಗೂ ನುಗ್ಗಿ ಗಲಾಟೆ ನಡೆಸಿರುವುದಲ್ಲದೆ, ಪೊಲೀಸರ ಸಮ್ಮುಖದಲ್ಲಿ ಗುಂಡಾ ರೀತಿ ವರ್ತಿಸಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಸ್ಥಳದಲ್ಲೇ ಪೊಲೀಸರ ಸಮ್ಮುಖದಲ್ಲಿ ಇಂತಹ ಗಂಭೀರ ರೀತಿಯ ಬೆದರಿಕೆ ಮತ್ತು ಗಲಾಟೆ ನಡೆದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮಹಿಳೆ ಹಾಗೂ ಆಕೆಯ ಪತಿಯ ಮೇಲೆ ಹಲ್ಲೆ ನಡೆಸಿರುವ ಆರೋಪದ ಜೊತೆಗೆ ಪೊಲೀಸ್ ವಾಹನದೊಳಗೆ ನುಗ್ಗಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದು ಮತ್ತು ಜೀವ ಬೆದರಿಕೆ ಹಾಕಿರುವ ಆರೋಪಿಗಳ ಬಗ್ಗೆಯೂ ಪೊಲೀಸರು ಪ್ರತ್ಯೇಕವಾಗಿ ತನಿಖೆ ನಡೆಸಬೇಕಾಗಿದೆ.

ಘಟನೆಯಲ್ಲಿ ಭಾಗಿಯಾಗಿರುವವರು ಯಾವುದೇ ಸಮುದಾಯಕ್ಕೆ ಸೇರಿದವರಾಗಿರಲಿ, ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಯಾವುದೇ ಒತ್ತಡಕ್ಕೆ ಮಣಿಯದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಹಾಗೂ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುವ ಪ್ರಯತ್ನಗಳನ್ನು ಸಹಿಸಲು ಸಾಧ್ಯವಿಲ್ಲ.

ಘಟನೆಯ ಸಂಪೂರ್ಣ ಸತ್ಯಾಸತ್ಯತೆಯನ್ನು ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ಹಲ್ಲೆ, ಬೆದರಿಕೆ ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಜಯ್ ದೀಕ್ಷಿತ್ ಶೆಟ್ಟಿ ಆಗ್ರಹಿಸಿದ್ದಾರೆ

ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವುದು ಅತ್ಯಂತ ಅಗತ್ಯವಾಗಿದ್ದು, ಯಾವುದೇ ವ್ಯಕ್ತಿ ಕಾನೂನನ್ನು ಕೈಗೆತ್ತಿಕೊಳ್ಳದಂತೆ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದೆ. ಹಾಗೂ ಅಂಗಡಿಯ ಮಾಲಕಿ ಅವರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಅಜಯ್ ದೀಕ್ಷಿತ್ ಶೆಟ್ಟಿ ಆಗ್ರಹಿಸಿದ್ದಾರೆ