ಅಜೆಕಾರು: ಹತ್ತನೇ ತರಗತಿಯಲ್ಲಿ ಕೆಲವು ವಿಷಯಗಳಲ್ಲಿ ಅನುತ್ತೀರ್ಣಗೊಂಡಿದ್ದು, ನಂತರ ಟ್ಯೂಶನ್ ಪಡೆದು ಎಸ್ಸೆಸ್ಸೆಲ್ಸಿ ಸಪ್ಲಿಮೆಂಟರಿ ಪರೀಕ್ಷೆ ಬರೆದಿದ್ದರೂ ಅನುತ್ತೀರ್ಣಗೊಂಡ ಕಾರಣ ಜೀವನದಲ್ಲಿ ಜಿಗುಪ್ಸೆಗೊಂಡು ವಿದ್ಯಾರ್ಥಿ ತೇಜಸ್ (17 ವರ್ಷ) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಜೆಕಾರಿನಲ್ಲಿ ನಡೆದಿದೆ.
ಎಸ್ಸೆಎಸ್ಸೆಲ್ಸಿ ಪರೀಕ್ಷೆ ಮತ್ತು ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಜಿಗುಪ್ಸೆಗೊಂಡ ವಿದ್ಯಾರ್ಥಿ ತೇಜಸ್ ಮನೆಯಿಂದ ಸ್ವಲ್ಪ ದೂರದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ (ಮಾ.27) ನಡೆದಿದೆ.
ಈ ಘಟನೆ ಬಗ್ಗೆ ತಂದೆ ರಮೇಶ ಮಂಜರಬೆಟ್ಟು ಅವರು ನೀಡಿದ ದೂರಿನ ಮೇರೆಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.